"ಇಂಥ ಮನಸ್ಥಿತಿಯಿಂದ ಮಹಿಳೆಯರ ರಕ್ಷಣೆ ನಿರೀಕ್ಷಿಸಲು ಸಾಧ್ಯವೇ?"

ನವದೆಹಲಿ, ಜನವರಿ 08: ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಸಂತ್ರಸ್ತೆ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ.

"ಅತ್ಯಾಚಾರ ಸಂತ್ರಸ್ತೆ ಕುರಿತು ಈ ರೀತಿ ಹೇಳಿಕೆ ನೀಡುವುದು ಎಷ್ಟು ಸರಿ, ಈ ರೀತಿಯ ಆಲೋಚನೆಯಿದ್ದವರಿಂದ ಮಹಿಳಾ ರಕ್ಷಣೆಯನ್ನು ನಿರೀಕ್ಷಿಸಲು ಸಾಧ್ಯವೇ" ಎಂದು ಪ್ರಶ್ನಿಸಿದ್ದಾರೆ.

ಇದೇ ಜನವರಿ 3ರಂದು ಉತ್ತರ ಪ್ರದೇಶದ ಬದೌನ್ ನಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಶುಕ್ರವಾರ, ಸಂತ್ರಸ್ತೆ ಮನೆಗೆ ಭೇಟಿ ನೀಡಿದ್ದ ಮಹಿಳಾ ಆಯೋಗದ ಸದಸ್ಯೆ ಚಂದ್ರಕುಮಾರಿ ದೇವಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅತ್ಯಾಚಾರ ಸಂತ್ರಸ್ತೆ ಮನೆಯಿಂದ ಒಬ್ಬಂಟಿಯಾಗಿ ಸಂಜೆ ನಂತರ ಹೋಗದೇ ಇದ್ದಿದ್ದರೆ ಅಥವಾ ಕುಟುಂಬ ಸದಸ್ಯರ ಜೊತೆ ಹೋಗಿದ್ದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದರು.

Priyanka Gandhi Slams NCW Member For Her Comment Over Budaun Rape

ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರಿಯಾಂಕಾ ಗಾಂಧಿ, "ಅತ್ಯಾಚಾರಕ್ಕೊಳಗಾದವನ್ನೇ ಮಹಿಳಾ ಆಯೋಗದ ಅಧ್ಯಕ್ಷೆ ದೂಷಿಸುತ್ತಿದ್ದಾರೆ. ಇಂಥವರಿಂದ ಮಹಿಳೆಯರ ರಕ್ಷಣೆ ಸಾಧ್ಯವೇ?, ಯಾರಿಗೆ ಈ ಬಗ್ಗೆ ಪ್ರಶ್ನಿಸಬೇಕು" ಎಂದು ಟ್ವಿಟ್ವರ್ ಮೂಲಕ ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+