ಪ್ರಿಯಾಂಕಾ ಗಾಂಧಿಗೆ ಡೆಂಗ್ಯೂ: ಆಸ್ಪತ್ರೆಗೆ ದಾಖಲು

Posted By:
Subscribe to Oneindia Kannada

ನವದೆಹಲಿ, ಆಗಸ್ಟ್ 26 : ಅನಾರೋಗ್ಯದಿಂದ ಬಳಲುತ್ತಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂದಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡೆಂಗ್ಯೂ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಚಾರಗಳಿವು...

ಜ್ವರದಿಂದ ಬಳಲುತ್ತಿದ್ದ ಪ್ರಿಯಾಂಕಾ ಗಾಂಧಿ ಅವರು ಆಗಸ್ಟ್ 23ರಂದು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆಯ ಬಳಿಕ ಪ್ರಿಯಾಂಕಾಗೆ ಡೆಂಗ್ಯೂ ಇರುವುದು ಪತ್ತೆಯಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಡಿಎಸ್ ರಾಣಾ ತಿಳಿಸಿದ್ದಾರೆ.

Priyanka Gandhi Vadra admitted to Hospital for dengue fever

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಆಸ್ಪತ್ರೆಗೆ ಭೇಟಿ ನೀಡಿ ಪ್ರಿಯಾಂಕಾ ಆರೋಗ್ಯ ವಿಚಾರಿಸಿದರು, ಪ್ರಿಯಾಂಕ ಪತಿ ರಾಬರ್ಟ್ ವಾದ್ರಾ ಅವರು ಸಹ ಶುಕ್ರವಾರ ಆಸ್ಪತ್ರೆಗೆ ತೆರಳಿ ಪತ್ನಿಯ ಆರೋಗ್ಯ ವಿಚಾರಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Congress President Sonia Gandhi's daughter Priyanka Gandhi Vadra is suffering from dengue and is under treatment at the Sir Ganga Ram Hospital (SRGH) here, said hospital authorities on Friday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ