ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಎ ಹೋರಾಟ; ದೆಹಲಿಯಲ್ಲಿ ಹಿಂಸಾಚಾರ, ಪೊಲೀಸರು ಸೇರಿ 3 ಸಾವು

|
Google Oneindia Kannada News

ನವದೆಹಲಿ, ಫೆಬ್ರವರಿ 24 : ಈಶಾನ್ಯ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಇಬ್ಬರು ಪೊಲೀಸರು ಸೇರಿದಂತೆ ಇದುವರೆಗೂ ಮೂವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Recommended Video

CAA protests take 3 lives in Delhi | CAA | Delhi | Oneindia Kannada

ಜಾಫರಾಬಾದ್, ಭಜನ್‌ಪುರ್, ಮೌಜ್‌ಪುರ್ ಸೇರಿದಂತೆ ಈಶಾನ್ಯ ದೆಹಲಿಯ ಹಲವು ಪ್ರದೇಶಗಳಲ್ಲಿ ಹೋರಾಟ ತೀವ್ರಗೊಂಡಿದೆ. ಮೌಜ್‌ಪುರ್‌ ಪ್ರದೇಶದಲ್ಲಿ ಎರಡು ಗುಂಪುಗಳ ನಡುವಿನ ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ.

ಎರಡನೇ ದಿನವೂ ಸಿಎಎ ಪರ-ವಿರೋಧಿ ಗುಂಪುಗಳ ನಡುವೆ ಕಲ್ಲು ತೂರಾಟಎರಡನೇ ದಿನವೂ ಸಿಎಎ ಪರ-ವಿರೋಧಿ ಗುಂಪುಗಳ ನಡುವೆ ಕಲ್ಲು ತೂರಾಟ

ಸೀಲಾಂಪುರ-ಮೌಜ್‌ಪುರ ಸೇರಿದಂತೆ ವಿವಿಧ ಸ್ಥಳಗಳಿಗೆ ಸಂಪರ್ಕಿಸುವ ಜಾಫರಾಬಾದ್ ಮೆಟ್ರೋ ರೈಲು ನಿಲ್ದಾಣದ ಬಳಿ ಪ್ರತಿಭಟನಾನಿರತರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ದೆಹಲಿಯಲ್ಲಿ ಸಿಎಎ ಪರ ಮತ್ತು ವಿರೋಧಿ ಗುಂಪುಗಳ ನಡುವೆ ಕಲ್ಲುತೂರಾಟದೆಹಲಿಯಲ್ಲಿ ಸಿಎಎ ಪರ ಮತ್ತು ವಿರೋಧಿ ಗುಂಪುಗಳ ನಡುವೆ ಕಲ್ಲುತೂರಾಟ

Pro And Anti CAA Protest Three Killed In East Delhi

ಎರಡು ಗುಂಪುಗಳ ಘರ್ಷಣೆಯಲ್ಲಿ 9 ವರ್ಷದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದುವರೆಗೂ 20 ಗಾಯಗೊಂಡಿದ್ದು, ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಶಾನ್ಯ ದೆಹಲಿಯ ಹಲವು ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಗಡಿಬಿಡಿ, ಮೋದಿ-ದೀದಿ ಸಿಡಿಮಿಡಿದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಗಡಿಬಿಡಿ, ಮೋದಿ-ದೀದಿ ಸಿಡಿಮಿಡಿ

ದೆಹಲಿಯಲ್ಲಿ ನಡೆಯುತ್ತಿರುವ ಘರ್ಷಣೆ ಬಗ್ಗೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ಎರಡು ಗುಂಪುಗಳ ನಡುವೆ ಭಾನುವಾರ ಪರಸ್ಪರ ಕಲ್ಲು ತೂರಾಟ ನಡೆದಿತ್ತು. ಸೋಮವಾರ ಇದು ಮುಂದುವರೆದಿದ್ದು, ಪೊಲೀಸರ ಮೇಲೆಯೂ ದಾಳಿ ನಡೆದಿದೆ. ಇಬ್ಬರು ಪೊಲೀಸರು ಸೇರಿ ಮೂವರು ಮೃತಪಟ್ಟಿದ್ದಾರೆ.

ಪರಿಸ್ಥಿತಿಯನ್ನು ಹತೋಟಿಗೆ ತರಲು ಈಶಾನ್ಯ ದೆಹಲಿಯಲ್ಲಿ 8 ಸಿಆರ್‌ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಎರಡು ಆರ್‌ಎಎಫ್ ತುಕಡಿಗಳನ್ನು ಹಾಕಲಾಗಿದೆ. ದೆಹಲಿ ಬರ್ನಿಂಗ್ ಎಂಬ ಹ್ಯಾಷ್ ಟ್ಯಾಗ್ ಟ್ವೀಟರ್‌ನಲ್ಲಿ ಟ್ರೆಂಡ್ ಆಗಿದೆ.

rathan lal

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಗುಜರಾತ್‌ನಿಂದ ಅವರು ಸೋಮವಾರ ಸಂಜೆ ದೆಹಲಿಗೆ ತಲುಪಿದ್ದಾರೆ. ಮಂಗಳವಾರ ರಾತ್ರಿ ತನಕ ಅವರು ದೆಹಲಿಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎರಡು ಗುಂಪುಗಳ ನಡುವಿನ ಕಲ್ಲು ತೂರಾಟದ ವೇಳೆ ರತನ್ ಲಾಲ್ (42) ಎಂಬ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ. ಗೋಕುಲ್‌ಪುರಿಯ ಎಸಿಪಿ ಕಚೇರಿಯಲ್ಲಿ ರತನ್ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಇಬ್ಬರು ಸಿಆರ್‌ಪಿಎಫ್ ಯೋಧರು ಸಹ ಗಾಯಗೊಂಡಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಘರ್ಷಣೆ ಬಗ್ಗೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ. ಒಟ್ಟು 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರತಿ ಪ್ರದೇಶದ ಪರಿಸ್ಥಿತಿಯನ್ನು ಪೊಲೀಸರು ಸೂಕ್ಷವಾಗಿ ಅವಲೋಕಿಸುತ್ತಿದ್ದಾರೆ.

ಪೊಲೀಸರ ಮೇಲೆ ಶಾರೂಕ್ ಎಂಬ ಯುವಕ ಗುಂಡು ಹಾರಿಸಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಆತನ ಫೋಟೋ ವೈರಲ್ ಆಗಿದ್ದು, ಸದ್ಯ ಆತ ಪೊಲೀಸರ ವಶದಲ್ಲಿದ್ದಾನೆ.

ಗೋಕುಲ್‌ಪುರಿಯ ಟೈರ್ ಮಾರುಕಟ್ಟೆಗೆ ಬೆಂಕಿ ಹಚ್ಚಲಾಗಿದೆ. ಬೆಂಕಿಯ ಹೊಗೆ ದಟ್ಟವಾಗಿ ಹಬ್ಬಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘರ್ಷಣೆ ಬಗ್ಗೆ ಟ್ವೀಟ್ ಮಾಡಿದ್ದಾರೆ.

English summary
Clashes reported at east Delhi on Monday during pro and anti CAA groups protest. Three including two police killed in clash.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X