ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ದೆಹಲಿಯಲ್ಲಿ ನಿಲ್ಲದ ಹಿಂಸಾಚಾರ

|
Google Oneindia Kannada News

ನವದೆಹಲಿ, ಡಿಸೆಂಬರ್ 17: ಪೌರತ್ವ ಕಾಯ್ದೆ ವಿರುದ್ಧ ಆರಂಭವಾದ ಹೋರಾಟ ದೆಹಲಿಯಲ್ಲಿ ವಿಕೋಪಕ್ಕೆ ತಿರುಗಿದ್ದು, ಪೊಲೀಸ್ ಮತ್ತು ವಿದ್ಯಾರ್ಥಿಗಳ ನಡುವಿನ ಹೋರಾಟವಾಗಿ ಮಾರ್ಪಟ್ಟಿದೆ.

ಜಾಮಿಯಾ ದಲ್ಲಿಯಂತೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹಿಂಸಾರೂಪಕ್ಕೆ ತಿರುಗಿದೆ. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆಗಳು ನಡೆದಿವೆ.

ಹಿಂಸಾಚಾರ ಹೆಚ್ಚಾದ ಕಾರಣ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಬಸ್ ಸಂಚಾರವೂ ಅಸ್ಥವ್ಯಸ್ತವಾಗಿದೆ. ಪೊಲೀಸರ ಮೇಲೆ ಪ್ರತಿಭಟನಾಕಾರರು ಹಲ್ಲೆ ನಡೆಸಿರುವ ಘಟನೆಗಳೂ ನಡೆದಿವೆ.

Protest Against CAA In Delhi Turned Violent

ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಕೆಲವೆಡೆ ಲಾಠಿ ಚಾರ್ಜ್ ಸಹ ಆಗಿದೆ.

ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯದ ವಿರುದ್ಧ ಕಾಂಗ್ರೆಸ್‌ ಪ್ರತ್ಯೇಕ ಪ್ರತಿಭಟನೆ ನಡೆಸಿದ್ದು, ಸೋನಿಯಾ ಗಾಂಧಿ ಅವರು ಪೊಲೀಸರ ಕ್ರಮವನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಸದಸ್ಯರು ರಾಷ್ಟ್ರಪತಿಗಳನ್ನು ಭೇಟಿ ನೀಡಿ ದೆಹಲಿ ಪರಿಸ್ಥಿತಿ ಬಗ್ಗೆ ಮತ್ತು ಈಶಾನ್ಯ ರಾಜ್ಯಗಳ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

English summary
Protest against CAA in New Delhi turned violent. Congress members met president about Delhi protest and police attack on students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X