ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವದೆಹಲಿ ಹಿಂಸಾಚಾರ: ಪೊಲೀಸರ ವಾಹನಕ್ಕೆ ಬೆಂಕಿ

|
Google Oneindia Kannada News

ನವದೆಹಲಿ, ಡಿಸೆಂಬರ್ 20: ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಹಿಂಸಾಚಾರವೂ ಮುಂದುವರೆದಿದೆ.

ದರಿಯಾಗಂಜ್, ಜಾಮಿಯಾ ಮಸೀದಿ ಪ್ರದೇಶ ಸೇರಿದಂತೆ ಹಲವು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸ್‌ ಚೌಕಿಗೆ ಸಹ ಪ್ರತಿಭಟನಾಕರರು ಬೆಂಕಿ ಹಚ್ಚಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ: ನಟ ಸಿದ್ದಾರ್ಥ್ ವಿರುದ್ಧ ಕೇಸ್ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ: ನಟ ಸಿದ್ದಾರ್ಥ್ ವಿರುದ್ಧ ಕೇಸ್

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಅಶ್ರುವಾಯು ಪ್ರಯೋಗವೂ ನಡೆದಿದೆ. ದೆಹಲಿಯಲ್ಲಿ ಪೊಲೀಸರು-ಪ್ರತಿಭಟನಾಕಾರರು ಎದುರುಬದುರಾಗಿದ್ದು, ಪರಸ್ಪರ ಕಲ್ಲು ತೂರಾಟ ಸಹ ನಡೆದಿದೆ.

Protest Against CAA In Delhi Turning Violent, Vehicles Set Fire

ಜಾಮಿಯಾ ಮಸೀದಿ ಬಳಿ ಬೆಳಿಗ್ಗೆಯಿಂದಲೂ ಶಾಂತಿಯುತವಾಗಿಯೇ ನಡೆಯುತ್ತಿತ್ತು. ಆದರೆ ಸಂಜೆ ವೇಳೆಗೆ ಪ್ರತಿಭಟನಾಕಾರನ್ನು ಸೇರಿಕೊಂಡ ಈಶಾನ್ಯ ರಾಜ್ಯಗಳಿಂದ ಬಂದು ದೆಹಲಿಯಲ್ಲಿ ನೆಲೆಸಿರುವ ದೊಡ್ಡ ಗುಂಪೊಂದು ಸ್ಥಳಕ್ಕೆ ಬಂದು ಪ್ರತಿಭಟನೆಗೆ ಶುರುಮಾಡಿತು.

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರಿಗೆ ರಾಜ್ಯ ಗೃಹ ಸಚಿವರ ಸಂದೇಶ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರಿಗೆ ರಾಜ್ಯ ಗೃಹ ಸಚಿವರ ಸಂದೇಶ

ನಂತರ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ಡಿಸಿಪಿ ಕಚೇರಿ ಮುಂದೆ ನಿಲ್ಲಿಸಿದ್ದ ಗಾಡಿಗೆ ಬೆಂಕಿ ಹಚ್ಚಲಾಯಿತು. ನಂತರ ಪೊಲೀಸರು ಅಶ್ರುವಾಯು, ಲಾಠಿಚಾರ್ಜ್‌ ಮಾಡುವ ಮೂಲಕ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

English summary
Protest against CAA and NRC in New Delhi turned violent. Police vehicles set fire near Jamia masjid.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X