ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಿಂಗಾಯತ ಪ್ರತ್ಯೇಕ ಧರ್ಮ ಪ್ರಸ್ತಾವ ತಿರಸ್ಕರಿಸಿದ ಕೇಂದ್ರದ ವಿರುದ್ಧ ಪ್ರತಿಭಟನೆ

|
Google Oneindia Kannada News

ನವದೆಹಲಿ, ಡಿಸೆಂಬರ್ 12: ಲಿಂಗಾಯತ ಪ್ರತ್ಯೇಕ ಧರ್ಮ ಮಾಡಬೇಕೆಂಬ ಕರ್ನಾಟಕ ಸರ್ಕಾರದ ಪ್ರಸ್ತಾವವನ್ನು ತಿರಸ್ಕರಿಸಿದ ಕೇಂದ್ರದ ವಿರುದ್ಧ ಇಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.

ದೆಹಲಿಯ ಜಂತರ್‌-ಮಂತರ್‌ನಲ್ಲಿ ಎರಡೂ ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದ ಲಿಂಗಾಯತ ಪ್ರತ್ಯೇಕ ಧರ್ಮ ಬೆಂಬಲಿಗರು ಮತ್ತು ಹಲವು ಸ್ವಾಮೀಜಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

protest against central government for denying separate religion status to Lingayatha

ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆ ತಿರಸ್ಕಾರ : ಯಾರು, ಏನು ಹೇಳಿದರು?

ಮಾತೆ ಮಹಾದೇವಿ ಸೇರಿದಂತೆ ರಾಜ್ಯದ ಹಲವು ಮಠಗಳ ಸ್ವಾಮೀಜಿಗಳು ಇಂದಿನ ಪ್ರತಿಭಟನೆಯಲ್ಲ ಭಾಗವಹಿಸಿದ್ದರು. ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮವನ್ನಾಗಿ ಮಾಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಸಂಸತ್‌ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

protest against central government for denying separate religion status to Lingayatha

ಸಿದ್ದರಾಮಯ್ಯ ಅವಧಿಯಲ್ಲಿ ಕರ್ನಾಟಕ ಸರ್ಕಾರವು, ಲಿಂಗಾಯತ ಪ್ರತ್ಯೇಕ ಧರ್ಮವನ್ನಾಗಿ ಮಾಡಲು ಶಿಫಾರಸ್ಸನ್ನು ಕೇಂದ್ರಕ್ಕೆ ಕಳುಹಿಸಿತ್ತು. ಡಿಸೆಂಬರ್ 10 ರಂದು ಕೇಂದ್ರ ಸರ್ಕಾರವು ಲಿಂಗಾಯತ ಜಾತಿಯನ್ನು ಪ್ರತ್ಯೇಕ ಧರ್ಮ ಮಾಡಲು ಸಾಧ್ಯವಿಲ್ಲ ಎಂದು ಸುಪ್ರಿಂಕೋರ್ಟ್‌ಗೆ ತಿಳಿಸಿತ್ತು. ಅಲ್ಲಿಗೆ ಲಿಂಗಾಯತ ಪ್ರತ್ಯೇಕ ಧರ್ಮದ ಪರವಾಗಿದ್ದವರಿಗೆ ಭಾರಿ ಹಿನ್ನಡೆ ಆದಂತಾಯಿತು.

English summary
Many people did protest against central government in New Delhi's Janthar Manthar for denying to give separate religion status to Lingyatha caste.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X