ಪಿಎಸ್ಐ ಹಗರಣ ಮುಚ್ಚಿಹಾಕಲು 3 ಕೋಟಿ ರೂಪಾಯಿ ಡೀಲ್- ಕಾಂಗ್ರೆಸ್ ಆರೋಪ
ಪಿಎಸ್ಐ ಹಗರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ ಆರೋಪಗಳ ಪಟ್ಟಿ ಇಲ್ಲಿದೆ.
ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ಮೂರು ಕೋಟಿ ರೂಪಾಯಿ ಡೀಲ್ ಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪ ಮಾಡಿದೆ. "ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ಮೂರು ಕೋಟಿ ರೂಪಾಯಿ ಕೇಳಿದ್ದರು. ನಾನು 76 ಲಕ್ಷ ಕೊಟ್ಟಿದ್ದೇನೆ ಎಂದು ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾನೆ'' ಎಂದು ಪ್ರತಿಪಕ್ಷ ಕಾಂಗ್ರೆಸ್ ಹೇಳಿದೆ. ಈ ಬಗ್ಗೆ ಪಿಎಸ್ಐ ಹಗರಣದ ಆರೋಪಿ ರುದ್ರೇಗೌಡ ಪಾಟೀಲ್ ಲೋಕಾಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಪ್ರಾಮಾಣಿಕ, ಪಾರದರ್ಶಕ ತನಿಖೆ ಎಂದು ಡೈಲಾಗ್ ಹೊಡೆದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಪಾರದರ್ಶಕತೆ ಇದೇನಾ? ಎಂದು ಪ್ರಶ್ನಿಸಿದೆ.
ಸರ್ಕಾರದ ತನಿಖೆಯಲ್ಲಿ ಸತ್ಯ ಸಮಾಧಿಯಾಗುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Another scam controversy hits @BSBommai govt.#PSI scam main accused Rudregowda Patil has alleged IO dysp Shankar Gowda Patil demanded Rs.3 crore from him & already took Rs.76 lakh to weaken case.Patil has written letter to lokayukta.@rssurjewala demands probe #Karnataka pic.twitter.com/OB0jUeqLQN
— Imran Khan (@KeypadGuerilla) January 25, 2023

ಪಿಎಸ್‌ಐ ಹಗರಣಗಳನ್ನು ಮುಚ್ಚಿಹಾಕುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಳ್ ಅವರೇ ಹೇಳಿದ್ದರು. ಅವರ ಹೇಳಿಕೆಗೆ ಪೂರಕವಾಗಿಯೇ ಘಟನೆಗಳು ನಡೆಯುತ್ತಿವೆ. ಬೊಮ್ಮಾಯಿ ಅವರ "ಪಾರದರ್ಶಕ, ಪ್ರಾಮಾಣಿಕ" ತನಿಖೆಯ ಅಸಲಿಯತ್ತು ಈಗ ಬಯಲಾಗಿದೆ. ಬಸವರಾಜ ಬೊಮ್ಮಾಯಿಗೆ ದಮ್ಮು, ತಾಕತ್ತು ಇದ್ದರೆ ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಲಿ ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದೆ.
ಪಿಎಸ್‌ಐ ಹಗರಣದ ಪಾರದರ್ಶಕತೆ ಹೇಗಿದೆ ಎಂದು ಹಗರಣದ ಆರೋಪಿಯಿಂದಲೇ ಬೆತ್ತಲಾಗಿದೆ. ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದಾಗ ಪ್ರಾಮಾಣಿಕ ತನಿಖೆ ನಡೆಯುತ್ತಿದೆ ಎಂಬ ಸೋಗಲಾಡಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಐಡಿ ಅಧಿಕಾರಿಗಳ 3 ಕೋಟಿ ಡೀಲಿಂಗ್ ಬಗ್ಗೆ ಈಗ ಮಾತಾಡುತ್ತಿಲ್ಲವೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications