Breaking; ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು
ನವದೆಹಲಿ, ಜುಲೈ 21; ಆಮ್ ಆದ್ಮಿ ಪಕ್ಷದ ನಾಯಕ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸಲಹೆಯಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
48 ವರ್ಷದ ಭಗವಂತ್ ಮಾನ್ ಬುಧವಾರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನಲೆ ವೈದ್ಯರ ಬಳಿ ಪರೀಕ್ಷೆಗೆ ತೆರಳಿದ್ದರು. ವೈದ್ಯರ ಸಲಹೆಯಂತೆ ದೆಹಲಿಯ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಆಸ್ಪತ್ರೆ ಮುಖ್ಯಮಂತ್ರಿಗಳ ಆರೋಗ್ಯದ ಬಗ್ಗೆ ಯಾವುದೇ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿಲ್ಲ.

ಮಾರ್ಚ್ 16ರಂದು ಭಗವಂತ್ ಮಾನ್ ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಕೆಲವು ದಿನಗಳ ಹಿಂದೆ ವೈದ್ಯರಾದ ಡಾ. ಗುರಪ್ರೀತ್ ಸಿಂಗ್ ಜೊತೆ ಮುಖ್ಯಮಂತ್ರಿ ಭಗವಂತ್ ಮಾನ್ ವಿವಾಹ ನಡೆದಿತ್ತು. ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ಗಣ್ಯರು ವಿವಾಹದಲ್ಲಿ ಪಾಲ್ಗೊಂಡಿದ್ದರು.
ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪಂಜಾಬ್‌ನಲ್ಲಿ ಬುಧವಾರ ಎನ್‌ಕೌಂಟರ್ ಮಾಡಲಾಗಿತ್ತು. ಮುಖ್ಯಮಂತ್ರಿ ಭಗವಂತ್ ಮಾನ್ ಪಂಜಾಬ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದರು.
ಹತ್ಯೆ ಪ್ರಕರಣದ ಆರೋಪಿಗಳು ಪೊಲೀಸರ ಜೊತೆ ಗುಂಡಿನ ಚಕಮಕಿ ನಡೆಸಿದ್ದರು. ಆಗ ಪೊಲೀಸರು ಶರಣಾಗುವಂತೆ ಸೂಚನೆ ನೀಡಿದರೂ ಆರೋಪಿಗಳು ಗುಂಡಿನ ದಾಳಿ ಮುಂದುವರೆಸಿದ್ದರು. ಆಗ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದರು, ಈ ಎನ್‌ಕೌಂಟರ್‌ನಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.
2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿತ್ತು. 117 ಸದಸ್ಯ ಬಲದ ವಿಧಾನಸಭೆಯಲ್ಲಿ 92 ಸ್ಥಾನಗಳನ್ನುಗಳಿಸುವ ಮೂಲಕ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿತ್ತು. ಚುನಾವಣೆಗೂ ಮುನ್ನ ಪಕ್ಷ ಭಗವಂತ್ ಮಾನ್‌ರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು.












Click it and Unblock the Notifications