ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಫೇಲ್ ದಾಖಲೆಗಳು ಕಳುವಾಗಿವೆ: ಸುಪ್ರೀಂಗೆ ಕೇಂದ್ರದ ಹೇಳಿಕೆ

|
Google Oneindia Kannada News

ವದೆಹಲಿ, ಮಾರ್ಚ್ 06: ರಫೇಲ್ ಡೀಲ್ ಕುರಿತು ತಾನು ನೀಡಿದ್ದ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆರಂಭಿಸಿದೆ.

ರಫೇಲ್ ಪ್ರಕರಣ : ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಸಿದ್ಧರಫೇಲ್ ಪ್ರಕರಣ : ತೀರ್ಪು ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಸಿದ್ಧ

ರಕ್ಷಣಾ ಸಚಿವಾಲಯದಿಂದ ಕೆಲವು ಮಹತ್ವದ ದಾಖಲೆಗಳು ಕಳುವಾಗಿದೆ. ಇದು ಬಹಳ ಸೂಕ್ಷ್ಮ ವಿಚಾರವಾಗಿದ್ದು, ಈ ಕುರಿತು ತನಿಖೆ ಮಾಡುತ್ತಿದ್ದೇವೆ ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.

ರಫೇಲ್ ಡೀಲ್ ದಾಖಲೆಗಳನ್ನು ಕಳುವು ಮಾಡಿದವರೇ ಅದರ ಮಾಹಿತಿ ಸೋರಿಕೆಯಾಗುವಂತೆ ಮಾಡಿದ್ದರು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ.

ಸೋರಿಕೆಯಾದ ರಫೇಲ್ ಡೀಲ್ ದಾಖಲೆಗಳನ್ನು ಪ್ರಕಟಿಸಿದ ಪತ್ರಿಕೆಗಳ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಹೇಳಿದೆ

ರಫೇಲ್ ಒಪ್ಪಂದದ ಜಂಟಿ ಸಂಸದೀಯ ಸಮಿತಿ ತನಿಖೆಗೆ ನಿರಾಕರಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ್ದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರದ ಮಾಜಿ ಸಚಿವರಾದ ಅರುಣ್ ಶೌರಿ ಮತ್ತು ಯಶವಂತ್ ಸಿನ್ಹಾ ಅವರೊಂದಿಗೆ ವಕೀಲ ಪ್ರಶಾಂತ್ ಭೂಷಣ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ರಫೆಲ್ ವಿವಾದ : ತೆರೆದ ಕೋರ್ಟ್‌ನಲ್ಲಿ ವಿಚಾರಣೆಗೆ ಅನುಮತಿ ರಫೆಲ್ ವಿವಾದ : ತೆರೆದ ಕೋರ್ಟ್‌ನಲ್ಲಿ ವಿಚಾರಣೆಗೆ ಅನುಮತಿ

ಫ್ರಾನ್ಸ್ ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಕೊಳ್ಳುವಾಗ ಕೇಂದ್ರ ಸರಕಾರದ ನಿರ್ಧಾರದಲ್ಲಿ ಯಾವುದೇ ಖಚಿತತೆ ಇರಲಿಲ್ಲ ಎಂದು ಆರೋಪಿಸಿ ಹೂಡಲಾಗಿದ್ದ ಸಾರ್ವಜನಿಕ ಹಿತರಕ್ಷಣಾ ಅರ್ಜಿ ಸೇರಿದಂತೆ ಎಲ್ಲ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಡಿಸೆಂಬರ್ 14ರಂದು ವಜಾ ಮಾಡಿತ್ತು.

Rafale Deal: Supreme court hearing review petition filed against its verdict

ನಂತರ ಫೆಬ್ರವರಿ 21 ರಂದು ಮತ್ತೆ ರಫೇಲ್ ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಅದರ ವಿಚಾರಣೆ ಇಂದು ನಡೆಯಲಿದೆ.

English summary
Supreme Court of India Hearing review petitions filed against Supreme courts verdict on Rafale deal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X