ರಫೇಲ್ ಡೀಲ್: ಸುಪ್ರೀಂ ನಲ್ಲಿಂದು ಮಹತ್ವದ ತೀರ್ಪು

ನವದೆಹಲಿ, ಏಪ್ರಿಲ್ 10: ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಮರುಪರಿಶೀಲನಾ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು(ಬುಧವಾರ) ತೀರ್ಪು ನೀಡಲಿದೆ.

ರಫೇಲ್ ಒಪ್ಪಂದದ ಜಂಟಿ ಸಂಸದೀಯ ಸಮಿತಿ ತನಿಖೆಗೆ ನಿರಾಕರಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ್ದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರದ ಮಾಜಿ ಸಚಿವರಾದ ಅರುಣ್ ಶೌರಿ ಮತ್ತು ಯಶವಂತ್ ಸಿನ್ಹಾ ಅವರೊಂದಿಗೆ ವಕೀಲ ಪ್ರಶಾಂತ್ ಭೂಷಣ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ಫ್ರಾನ್ಸ್ ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಕೊಳ್ಳುವಾಗ ಕೇಂದ್ರ ಸರಕಾರದ ನಿರ್ಧಾರದಲ್ಲಿ ಯಾವುದೇ ಖಚಿತತೆ ಇರಲಿಲ್ಲ ಎಂದು ಆರೋಪಿಸಿ ಹೂಡಲಾಗಿದ್ದ ಸಾರ್ವಜನಿಕ ಹಿತರಕ್ಷಣಾ ಅರ್ಜಿ ಸೇರಿದಂತೆ ಎಲ್ಲ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಡಿಸೆಂಬರ್ 14ರಂದು ವಜಾ ಮಾಡಿತ್ತು.

Rafale Deal: SC to pronounce its verdict on pleas to review its december verdict

ನಂತರ ಫೆಬ್ರವರಿ 21 ರಂದು ಮತ್ತೆ ರಫೇಲ್ ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಈಗಾಗಲೇ ಈ ಕುರಿತು ವಿಚಾರಣೆ ಮುಗಿದಿದ್ದು, ಬುಧವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+