ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಫೇಲ್ ಡೀಲ್: ಸುಪ್ರೀಂ ನಲ್ಲಿಂದು ಮಹತ್ವದ ತೀರ್ಪು

|
Google Oneindia Kannada News

ನವದೆಹಲಿ, ಏಪ್ರಿಲ್ 10: ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಮರುಪರಿಶೀಲನಾ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು(ಬುಧವಾರ) ತೀರ್ಪು ನೀಡಲಿದೆ.

ರಫೇಲ್ ಒಪ್ಪಂದದ ಜಂಟಿ ಸಂಸದೀಯ ಸಮಿತಿ ತನಿಖೆಗೆ ನಿರಾಕರಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದ್ದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರದ ಮಾಜಿ ಸಚಿವರಾದ ಅರುಣ್ ಶೌರಿ ಮತ್ತು ಯಶವಂತ್ ಸಿನ್ಹಾ ಅವರೊಂದಿಗೆ ವಕೀಲ ಪ್ರಶಾಂತ್ ಭೂಷಣ್ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ರಫೇಲ್ ದಾಖಲೆಗಳ ಬಗ್ಗೆ ಬುಧವಾರದಂದು ಸುಪ್ರೀಂ ತೀರ್ಪುರಫೇಲ್ ದಾಖಲೆಗಳ ಬಗ್ಗೆ ಬುಧವಾರದಂದು ಸುಪ್ರೀಂ ತೀರ್ಪು

ಫ್ರಾನ್ಸ್ ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಕೊಳ್ಳುವಾಗ ಕೇಂದ್ರ ಸರಕಾರದ ನಿರ್ಧಾರದಲ್ಲಿ ಯಾವುದೇ ಖಚಿತತೆ ಇರಲಿಲ್ಲ ಎಂದು ಆರೋಪಿಸಿ ಹೂಡಲಾಗಿದ್ದ ಸಾರ್ವಜನಿಕ ಹಿತರಕ್ಷಣಾ ಅರ್ಜಿ ಸೇರಿದಂತೆ ಎಲ್ಲ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಡಿಸೆಂಬರ್ 14ರಂದು ವಜಾ ಮಾಡಿತ್ತು.

Rafale Deal: SC to pronounce its verdict on pleas to review its december verdict

ಸುಪ್ರೀಂನಲ್ಲಿಂದು ರಫೇಲ್ ತೀರ್ಪಿನ ಮರು ಪರಿಶೀಲನಾ ಅರ್ಜಿ ವಿಚಾರಣೆಸುಪ್ರೀಂನಲ್ಲಿಂದು ರಫೇಲ್ ತೀರ್ಪಿನ ಮರು ಪರಿಶೀಲನಾ ಅರ್ಜಿ ವಿಚಾರಣೆ

ನಂತರ ಫೆಬ್ರವರಿ 21 ರಂದು ಮತ್ತೆ ರಫೇಲ್ ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಈಗಾಗಲೇ ಈ ಕುರಿತು ವಿಚಾರಣೆ ಮುಗಿದಿದ್ದು, ಬುಧವಾರ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.

English summary
Supreme Court of India on Wednesday pronounce it's verdict on re-examining its december verdict, which gave a clean chit to the Narendra Modi government over the deal for Rafale fighter jets.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X