ರಫೇಲ್ ತೀರ್ಪು: ಕೇಂದ್ರಕ್ಕೆ ಹಿನ್ನಡೆ, ಸತ್ಯಮೇವ ಜಯತೆ ಎಂದ ಕಾಂಗ್ರೆಸ್!
ನವದೆಹಲಿ, ಏಪ್ರಿಲ್ 10: ರಫೇಲ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ನೀಡಿದ ತೀರ್ಪಿನಿಂದ ಕೇಂದ್ರ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದ್ದು, ಇದನ್ನು 'ಭಾರತದ ವಿಜಯ' ಎಂದು ಕಾಂಗ್ರೆಸ್ ಬಣ್ಣಿಸಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ರಫೇಲ್ ಗೆ ಸಂಬಂಧಿಸಿದ 'ಕಳುವಾದ' ದಾಖಲೆಗಳನ್ನು ಪರಾಮರ್ಶೆಗಾಗಿ ಬಳಸಿಕೊಳ್ಳಬಹುದು ಎಂದು ತನ್ನ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಇದರಿಂದ ಸೋರಿಕೆಯಾದ ದಾಖಲೆಗಳನ್ನು ತೀರ್ಪು ಮರುಪರಿಶೀಲನೆಗೆ ಬಳಸಿಕೊಳ್ಳುವಂತೆ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಪ್ರಾಥಮಿಕ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆ ಉಂಟಾದಂತಾಗಿದೆ.
2018ರ ಡಿಸೆಂಬರ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ನೀಡಿದ್ದ ಕ್ಲೀನ್ ಚಿಟ್ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗಿತ್ತು.
ಲೋಕಸಭೆ ಚುನಾವಣೆ ಹತ್ತಿರದಲ್ಲಿರುವಾಗ ಹೊರಬಿದ್ದ ಈ ತೀರ್ಪು ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
|
ಸತ್ಯಮೇವ ಜಯತೇ!
"ಇದು ಭಾರತದ ವಿಜಯ. ಮರುಪರುಶೀಲನಾ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಸತ್ಯಮೇವ ಜಯತೇ" -ಕಾಂಗ್ರೆಸ್.
| Array |
ಅರುಣ್ ಶೌರಿ
ದಾಖಲೆಗಳು ಭದ್ರತಾ ಕ್ಷೇತ್ರಕ್ಕೆ ಸಂಬಂಧಿಸಿದ್ದಾದ್ದರಿಂದ ಅವನ್ನು ಕೂಲಂಕಷವಾಗಿ ಪರಿಶಿಲಿಸಬೇಕು ಎಂಬುದು ನಮ್ಮ ವಾದವಾಗಿತ್ತು. ಅದಕ್ಕಾಗಿ ನೀವು ನಮ್ಮ ಬಳಿ ಸಾಕ್ಷಿ ಕೇಳಿದಿರಿ, ನಾವು ಕೊಟ್ಟಿದ್ದೇವೆ. ನಮ್ಮ ವಾದವನ್ನು ಸುಪ್ರೀಂ ಕೋರ್ಟ್ ಒಪ್ಪಿ, ಸರ್ಕಾರದ ವಾದವನ್ನು ತಿರಸ್ಕರಿಸಿದೆ ಅಷ್ಟೆ- ಅರುಣ್ ಶೌರಿ.
|
ದಿನೇಶ್ ಗುಂಡೂರಾವ್
ರಫೇಲ್ ದಾಖಲೆಗಳು ಕಳುವಾಗಿರುವುದನ್ನು ನೋಡಿದರೆ ಈ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಮಧ್ಯವರ್ತಿಯಂತೆ ಕೆಲಸ ಮಾಡಿದ್ದು ಗೊತ್ತಾಗುತ್ತದೆ! ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಭಾರತದ ಅತ್ಯಂತ ದೊಡ್ಡ ರಕ್ಷಣಾ ಕ್ಷೇತ್ರದ ಹಗರದಣದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಜೈಲಿಗೆ ಹೋಗುವ ದಿನ ಹೆಚ್ಚು ದೂರವಿಲ್ಲ! -ದಿನೇಶ್ ಗುಂಡೂರಾವ್
| Array |
ಅಭಿಜಿತ್ ಮಜುಂದಾರ್
ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಮೋದಿ ಸರ್ಕಾರಕ್ಕೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವುದಕ್ಕೆ ಇರುವ ಒಂದು ಅವಕಾಶ. ಅದಕ್ಕೆ ಭಯವೇಕೆ?- ಅಭಿಜಿತ್ ಮಜುಂದಾರ್.












Click it and Unblock the Notifications