ರಫೇಲ್ ತೀರ್ಪು: ಮತ್ತೊಮ್ಮೆ 'ಚೌಕಿದಾರ್ ಚೋರ್' ಎಂದ ರಾಹುಲ್ ಗಾಂಧಿ
ನವದೆಹಲಿ, ಏಪ್ರಿಲ್ 10: ರಫೇಲ್ ಡೀಲ್ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
"ರಫೇಲ್ ವಿವಾದದ ಕುರಿತ ದಾಖಲೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಇಂದು ನೀಡಿದ ತೀರ್ಪಿನಿಂದ ಚೌಕಿದಾರ ಚೋರ ಎಂಬುದು ಸಾಬೀತಾಗಿದೆ. ಇದರಿಂದಾಗಿ ಮತ್ತಷ್ಟು ಭ್ರಷ್ಟಾಚಾರದ ಪ್ರಕರಣಗಳು ಹೊರಬರಲಿವೆ. ಇದು ನ್ಯಾಯದ ಗೆಲುವು. ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಇದು ಅತ್ಯಂತ ಪ್ರಮುಖ ದಿನ" ಎಂದು ರಾಹುಲ್ ಗಾಂಧಿ ಹೇಳಿದರು.
Congress President @RahulGandhi addresses the media on today's Supreme Court judgement on the Rafale Deal.#ChowkidarChorHai #AbHogaNyay #RafaleDeal pic.twitter.com/5PnTuUY24d
— Congress (@INCIndia) 10 April 2019
"ನೀವು ಭ್ರಷ್ಟಾಚಾರ ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಾನು ಈಗಲೂ ಮೋದಿಯವರಿಗೆ ಸವಾಲೆಸೆಯುತ್ತೇನೆ. ನನ್ನೊಂದಿಗೆ ಚರ್ಚೆಗೆ ಬನ್ನಿ. ಪ್ರೀತಿಯಿಂದ ಚರ್ಚಿಸೋಣ. ಈ ದೇಶದ ಜನರಿಗೆ ರಫೇಲ್ ಬಗ್ಗೆ ತಿಳಿಯಬೇಕಿದೆ. ಭ್ರಷ್ಟಾಚಾರದ ಬಗ್ಗೆ ತಿಳಿಯಬೇಕಿದೆ. ಅಪನಗದೀಕರಣದ ಬಗ್ಗೆ ತಿಳಿಯಬೇಕಿದೆ" ಎಂದು ರಾಹುಲ್ ಗಾಂಧಿ ಸವಾಲೆಸೆದರು.

"ಪ್ರಧಾನಿ ಮೋದಿ ಅವರು ವಾಯುಸೇನೆಯ ಹಣವನ್ನು ತೆಗೆದು ಅನಿಲ್ ಅಂಬಾನಿ ಅವರ ಜೇಬಿಗೆ ಹಾಕಿದ್ದಾರೆ. ಆ ಸತ್ಯ ಜನರಿಗೆ ತಿಳಿಯಬೇಕು" ಎಂದು ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದರು.
ರಫೇಲ್ ಗೆ ಸಂಬಂಧಿಸಿದ 'ಕಳುವಾದ' ದಾಖಲೆಗಳನ್ನು ಪರಾಮರ್ಶೆಗಾಗಿ ಬಳಸಿಕೊಳ್ಳಬಹುದು ಎಂದು ಸುಪ್ರೀಂಕೋರ್ಟ್ ಬುಧವಾರ ತೀರ್ಪು ನೀಡಿದೆ. ಇದರಿಂದ ಸೋರಿಕೆಯಾದ ದಾಖಲೆಗಳನ್ನು ತೀರ್ಪು ಮರುಪರಿಶೀಲನೆಗೆ ಬಳಸಿಕೊಳ್ಳುವಂತೆ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಪ್ರಾಥಮಿಕ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆ ಉಂಟಾದಂತಾಗಿದೆ.












Click it and Unblock the Notifications