ಕಾಸರಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕೊಲೆಗೆ ರಾಹುಲ್ ಆಕ್ರೋಶ

ನವದೆಹಲಿ, ಫೆ.18: ಕರ್ನಾಟಕ-ಕೇರಳ ಗಡಿಯ ಕಾಸರಗೋಡಿನಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಹಂತಕರಿಗೆ ಶಿಕ್ಷೆ ಕೊಡಿಸುವವರೆಗೆ ನಮ್ಮ ಪಕ್ಷ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ, ಕಾಸರಗೋಡುವಿನಲ್ಲಿ ನಮ್ಮ ಯುವ ಕಾಂಗ್ರೆಸ್ ಕುಟುಂಬದ ಇಬ್ಬರು ಸದಸ್ಯರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹತರಾದ ಯುವಕರ ಕುಟುಂಬಗಳಿಗೆ ಕಾಂಗ್ರೆಸ್ ನೈತಿಕ ಬೆಂಬಲ ನೀಡಲಿದ ಎಂದಿದ್ದಾರೆ.

ಭಾನುವಾರ ರಾತ್ರಿ ಕರ್ನಾಟಕ-ಕೇರಳ ಗಡಿಯ ಕಾಸರಗೋಡಿನಲ್ಲಿ ದುಷ್ಕರ್ಮಿಗಳು ಕೃಪೇಶ್ ಮತ್ತು ಶರತ್ ಲಾಲ್ ಎಂಬ ಯುವ ಕಾರ್ಯಕರ್ತರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

Rahul express his anger on congress workers murder in Kasaragodu

ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ಕಾಂಗ್ರೆಸ್ ಇಂದು ಕೇರಳ ಬಂದ್‌ಗೆ ಕರೆ ಕೊಟ್ಟಿದ್ದು, ವಿವಿಧೆಡೆ ಹರತಾಳ ನಡೆಯುತ್ತಿದೆ. ಕೃಪೇಶ್ ಮತ್ತು ಶರತ್‍ಲಾಲ್ ಹತ್ಯೆಗೆ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿ ಕಾಸರಗೋಡು ಸೇರಿದಂತೆ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಪ್ರತಿಭಟನೆ ಮೆರವಣಿಗೆ ನಡೆಸಿದೆ.

ಹಂತಕರನ್ನು ಕಾನೂನಿಗೆ ಒಪ್ಪಿಸುವ ವರೆಗೆ ತನಕ ಪಕ್ಷ ವಿಶ್ರಾಂತಿ ಪಡೆಯುವುವುದಿಲ್ಲ ಎಂದು ಹೇಳಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯನ್ನು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲ ಉಗ್ರವಾಗಿ ಖಂಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+