ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸದ ರಾಹುಲ್ ಗಾಂಧಿಗೆ ಮತ್ತೆ ಎಐಸಿಸಿ ಪಟ್ಟ?

|
Google Oneindia Kannada News

Recommended Video

Rahul Gandhi Selected As AICC President?Again!! | Rahul Gandhi | AICC | Oneindia Kannada

ನವದೆಹಲಿ, ಫೆಬ್ರವರಿ.21: ಅಖಿಲ ಭಾರತ ಕಾಂಗ್ರೆಸ್ ಕಮಿಟಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮತ್ತೊಮ್ಮೆ ರಾಹುಲ್ ಗಾಂಧಿಯವರನ್ನೇ ಆಯ್ಕೆ ಮಾಡುವ ಮುನ್ಸೂಚನೆಗಳು ಸಿಕ್ಕಿವೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರತಿಸ್ಪರ್ಧಿಯೇ ಇಲ್ಲದ ಕಾರಣ ರಾಹುಲ್ ಗಾಂಧಿ ಒಬ್ಬರೇ ಆ ಸ್ಥಾನಕ್ಕೆ ಸೂಕ್ತ ಎಂಬ ಕೂಗು ಕೇಳಿ ಬಂದಿದೆ.
ಮುಂಬರುವ ಎಪ್ರಿಲ್ ನಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಸಾಧ್ಯತೆಗಳಿದ್ದು, ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಮತ್ತೊಮ್ಮೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಬಗ್ಗೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಚಿಂತನೆ ನಡೆಸಲಾಗುತ್ತಿದೆ.

ನಾನು ರಾಜೀನಾಮೆ ಕೊಡಲೇ ಎಂದು ಕೇಳಿದ್ದ ಮನಮೋಹನ್ ಸಿಂಗ್
ಇನ್ನು, ಪಕ್ಷದಲ್ಲೇ ರಾಹುಲ್ ಗಾಂಧಿ ಮರುಆಯ್ಕೆ ಬಗ್ಗೆ ಭಿನ್ನರಾಗ ಕೇಳಿ ಬಂದಿದೆ. ಪಕ್ಷದ ಕೆಲವು ನಾಯಕರು ರಾಷ್ಟ್ರೀಯ ಮಟ್ಟದಲ್ಲಿ ರಾಹುಲ್ ಗಾಂಧಿ ಅವರನ್ನು ಜನರು ಒಪ್ಪಿಕೊಳ್ಳುತ್ತಾರೆ. ಅಲ್ಲದೇ ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸುವ ಸಾಮರ್ಥ್ಯ ಸದ್ಯದ ಪರಿಸ್ಥಿತಿಯಲ್ಲಿ ರಾಹುಲ್ ಗಾಂಧಿ ಒಬ್ಬರಿಗೇ ಇರುವುದು ಎಂದು ವಾದ ಮಂಡಿಸಿದ್ದಾರೆ.

Rahul Gandhi Again Selected As AICC President?

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಿಂದ ತೀರ್ಮಾನ:
ಎಐಸಿಸಿಗೆ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಮತ್ತು ಬೇಡಿಕೆ ಇಟ್ಟಿದ್ದರು. ಹೀಗಾಗಿ ಈ ವಿಚಾರ ಚರ್ಚೆಗೆ ಬಂದಿದ್ದು, ಮತ್ತೊಮ್ಮೆ ರಾಹುಲ್ ಗಾಂಧಿಗೆ ಪಟ್ಟಾಭಿಷೇಕ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ.
ಕಾಂಗ್ರೆಸ್ ಮುಖಂಡ ರಣದೀಪ್ ಸರ್ಜೇವಾಲ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡಬೇಕು ಎಂಬ ವಿಚಾರವನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಂದೆ ಇಡಲಾಗುತ್ತದೆ. ಸಮಿತಿ ಸದಸ್ಯರ ತೀರ್ಮಾನದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಅದಕ್ಕೂ ಮೊದಲು ಯಾವ ನಾಯಕರು ಕೂಡಾ ಈ ಬಗ್ಗೆ ಹೇಳಿಕೆಯನ್ನು ನೀಡಬಾರದು ಎಂದಿದ್ದಾರೆ.
ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆಯನ್ನು ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಸಲ್ಲಿಸಿದ್ದರು.

English summary
Rahul Gandhi Again Selected As AICC President?. Congress Leaders Discuss About Parties Top Post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X