ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಧನ ಭೀತಿಯಲ್ಲಿರುವ ಚಿದಂಬರಂ ಬೆಂಬಲಕ್ಕೆ ರಾಹುಲ್, ಪ್ರಿಯಾಂಕಾ

|
Google Oneindia Kannada News

ನವದೆಹಲಿ, ಆಗಸ್ಟ್ 21: ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ವಿತ್ತ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ಬೆಂಬಲಕ್ಕೆ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಿಂತಿದ್ದಾರೆ.

"ಮೋದಿ ಸರ್ಕಾರ ಜಾರಿನಿರ್ದೇಶನಾಲಯ ಮತ್ತು ಸಿಬಿಐ ಸೇರಿದಂತೆ ಪ್ರಜಾಪ್ರಭುತ್ವದ ಇತರ ಎಲ್ಲಾ ವಿಭಾಗಗಳನ್ನೂ ಉಪಯೋಗಿಸಿಕೊಂಡು ಪಿ. ಚಿದಂಬರಂ ಚಾರಿತ್ರ್ಯ ಹರಣ ಮಾಡುತ್ತಿದೆ. ಅಧಿಕಾರವನ್ನು ಹೀಗೆಲ್ಲ ದುರುಪಯೋಗ ಮಾಡಿಕೊಳ್ಳುವ ಸರ್ಕಾರದ ಕ್ರಮವನ್ನು ನಾನು ಕಟುವಾಗಿ ವಿರೋಧಿಸುತ್ತೇನೆ" ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

Recommended Video

CBI ಅಧಿಕಾರಿಗಳ ಕೈಗೆ ಸಿಗುತ್ತಿಲ್ಲ ಚಿದಂಬರಂ..? | P Chidambaram | Oneindia Kannada

Live Updates ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ: ಚಿದಂಬರಂಗೆ ಬಂಧನ ಭೀತಿLive Updates ಅರ್ಜಿ ವಿಚಾರಣೆ ಸಾಧ್ಯವಿಲ್ಲ ಎಂದ ಸುಪ್ರೀಂ: ಚಿದಂಬರಂಗೆ ಬಂಧನ ಭೀತಿ

"ರಾಜ್ಯ ಸಭೆಯ ಅತ್ಯಂತ ಅರ್ಹ ಮತ್ತು ಹೌರವಾನ್ವಿತ ಸದಸ್ಯರಾದ ಪಿ.ಚಿದಂಬರಂ ಅವರು ದೇಶಕ್ಕಾಗಿ ದಶಕಗಳ ಕಾಲ ದುಡಿದಿದ್ದಾರೆ. ಹಣಕಾಸು, ಗೃಹ ಸಚಿವರಾಗಿ ಕೆಲಸ ಮಾಡಿದ್ದಾರೆ. ಈ ದೇಶಕ್ಕೆ ತಮ್ಮ ನಿಷ್ಠೆಯನ್ನು ತೋರಿಸಿದ್ದಾರೆ. ಅವರು ಈ ಸರ್ಕಾರದ ವೈಫಲುಗಳನ್ನು ನಿರ್ಭೀತಿಯಿಂದ ಬಹಿರಂಗ ಪಡಿಸಿದ್ದಾರೆ. ಅವರನ್ನು ಎದುರಿಸಲು ಧೈರ್ಯವಿಲ್ಲದೆ, ಅವರಾಡುವ ಸತ್ಯದ ಮಾತನ್ನು ಅರಗಿಸಿಕೊಳ್ಳುವ ತಾಕತ್ತಿಲ್ಲದೆ ಸರ್ಕಾರ ಅವರ ವಿರುದ್ಧ ಷಡ್ಯಂತ್ರ ಮಾಡುತ್ತಿದೆ. ಇದು ನಿಜಕ್ಕೂ ನಾಚಿಕೆಗೇಡು" ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿ, ತಮ್ಮ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.

Rahul Gandhi And Priyanka Gandhi Backed P Chidambaram

"ನಾವು ಅವರ ಪರವಾಗಿ ನಿಲ್ಲುತ್ತೇವೆ. ಎಂಥದೇ ಸಂದರ್ಭ ಬಂದರೂ ನಅವು ಸತ್ಯಕ್ಕಾಗಿ ಹೋರಾಟ ನಡೆಸುತ್ತೇವೆ" ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಅಂದು ಅಮಿತ್ ಶಾ, ಇಂದು ಚಿದಂಬರಂ: ಎಲ್ಲರ ಕಾಲನ್ನೂ ಎಳೆಯುತ್ತೆ ಕಾಲ!ಅಂದು ಅಮಿತ್ ಶಾ, ಇಂದು ಚಿದಂಬರಂ: ಎಲ್ಲರ ಕಾಲನ್ನೂ ಎಳೆಯುತ್ತೆ ಕಾಲ!

ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಪಿ ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಪಿ.ಚಿದಂಬರಂ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ತುರ್ತಾಗಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಚಿದಂಬರಂ ಅವರು ಬಂಧನ ಭೀತಿ ಎದುರಿಸುತ್ತಿದ್ದಾರೆ.

ಈಗಾಗಲೇ ಅವರು ನಾಪತ್ತೆಯಾಗಿದ್ದು, ಸಿಬಿಐ ಮತ್ತು ಜಅರಿ ನಿರ್ದೇಶಲನಾಲಯದ ಅಧಿಕಾರಿಗಳು ಅವರಿಗಾಗಿ ಹುಡುಕಾಟ ನಾಡೆಸುತ್ತಿದ್ದಾರೆ.

English summary
Rahul Gandhi And Priyanka Gandhi Backed P Chidambaram
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X