ಯಾತ್ರೆ ಅರ್ಧಕ್ಕೇ ಮೊಟಕುಗೊಳಿಸಿ ಬಂದ್ ಗೆ ಹಾಜರಾದ ರಾಹುಲ್
Recommended Video

ನವದೆಹಲಿ, ಸೆಪ್ಟೆಂಬರ್ 10: ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತ್ ಬಂದ್ ಹಿನ್ನಲೆಯಲ್ಲಿ ಯಾತ್ರೆಯನ್ನು ಮೊಟಕುಗೊಳಿಸಿ, ಪ್ರತಿಭಟನೆಗೆ ಹಾಜರಾಗಿದ್ದಾರೆ.
ತೈಲ ಬೆಲೆ ಏರಿಕೆ ಖಂಡಿಸಿ ಮಾತ್ರವಲ್ಲದೆ, ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಪತನ ಕಾಣುತ್ತಿರುವುದು ಮತ್ತು ರಫೆಲ್ ಡೀಲ್ ಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ರಚಿಸಲು ಒತ್ತಾಯಿಸಿ ಬಂದ್ ಆಚರಿಸಲಾಗುತ್ತಿದೆ.
ನವದೆಹಲಿಯ ರಾಜಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಅವರ ಸಮಾಧಿಗೆ ನಮಸ್ಕರಿಸಿದ ನಂತರ ರಾಮಲೀಲಾ ಮೈದಾನದ ಕಡೆಗೆ ಅವರು ಪಾದಯಾತ್ರೆ ಹೊರಟಿದ್ದಾರೆ.
ಕಳೆದ ಒಂದು ವಾರದಿಂದ ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿದ್ದ ಅವರು, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ವಿರುದ್ಧ ಕಾಂಗ್ರೆಸ್ ಮತ್ತು ಇನ್ನಿತರ ಬಿಜೆಪಿ ವಿರೋಧೀ ಪಕ್ಷಗಳು ಕರೆದಿರುವ ಬಂದ್ ಗೆ ಬೆಂಬಲ ನೀಡಲು ನವದೆಹಲಿಗೆ ವಾಪಸ್ಸಾದರು.ಯಾಕ್ ಸಾರ್, ಭಾರತ

ಗಗನಕ್ಕೇರಿರುವ ತೈಲ ಬೆಲೆ ವಿರೋಧಿಸಿ ಕರೆ ನೀಡಿರುವ ಬಂದ್ ಗೆ ದೇಶದಾದ್ಯಂತ ಕಾಂಗ್ರೆಸ್ ಮತ್ತು ಇನ್ನಿತರ ಬಿಜೆಪಿ ವಿರೋಧಿ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸಾಕಷ್ಟು ಬೆಂಬಲ ವ್ಯಕ್ತವಾಗುತ್ತಿದೆ. ಕರ್ನಾಟಕದ ಬಹುಪಾಲು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ದೇಶದೆಲ್ಲೆಡೆ ಸಾರ್ವಜನಿಕ ಸಾರಿಗೆ ಸಂಚಾರ ವ್ಯತ್ಯಯವಾಗುತ್ತಿದೆ. ಜನಜೀವನ ಅಸ್ತವ್ಯಸ್ತವಾಗಿದೆ.












Click it and Unblock the Notifications