ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾತ್ರೆ ಅರ್ಧಕ್ಕೇ ಮೊಟಕುಗೊಳಿಸಿ ಬಂದ್ ಗೆ ಹಾಜರಾದ ರಾಹುಲ್

|
Google Oneindia Kannada News

Recommended Video

ಯಾತ್ರೆ ಅರ್ಧಕ್ಕೇ ಮೊಟಕುಗೊಳಿಸಿ ಬಂದ್ ಗೆ ಹಾಜರಾದ ರಾಹುಲ್ | Oneindia Kannada

ನವದೆಹಲಿ, ಸೆಪ್ಟೆಂಬರ್ 10: ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತ್ ಬಂದ್ ಹಿನ್ನಲೆಯಲ್ಲಿ ಯಾತ್ರೆಯನ್ನು ಮೊಟಕುಗೊಳಿಸಿ, ಪ್ರತಿಭಟನೆಗೆ ಹಾಜರಾಗಿದ್ದಾರೆ.

ತೈಲ ಬೆಲೆ ಏರಿಕೆ ಖಂಡಿಸಿ ಮಾತ್ರವಲ್ಲದೆ, ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಪತನ ಕಾಣುತ್ತಿರುವುದು ಮತ್ತು ರಫೆಲ್ ಡೀಲ್ ಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ರಚಿಸಲು ಒತ್ತಾಯಿಸಿ ಬಂದ್ ಆಚರಿಸಲಾಗುತ್ತಿದೆ.

LIVE: ಭಾರತ್ ಬಂದ್: ಯಾತ್ರೆ ಮೊಟಕುಗೊಳಿಸಿ ಪ್ರತಿಭಟನೆಗೆ ಹಾಜರಾದ ರಾಹುಲ್ ಗಾಂಧಿLIVE: ಭಾರತ್ ಬಂದ್: ಯಾತ್ರೆ ಮೊಟಕುಗೊಳಿಸಿ ಪ್ರತಿಭಟನೆಗೆ ಹಾಜರಾದ ರಾಹುಲ್ ಗಾಂಧಿ

ನವದೆಹಲಿಯ ರಾಜಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಅವರ ಸಮಾಧಿಗೆ ನಮಸ್ಕರಿಸಿದ ನಂತರ ರಾಮಲೀಲಾ ಮೈದಾನದ ಕಡೆಗೆ ಅವರು ಪಾದಯಾತ್ರೆ ಹೊರಟಿದ್ದಾರೆ.

ಭಾರತ್ ಬಂದ್: ಕರಾವಳಿಯಲ್ಲಿ ತಟ್ಟಿದ ಪ್ರತಿಭಟನೆಯ ಬಿಸಿ ಭಾರತ್ ಬಂದ್: ಕರಾವಳಿಯಲ್ಲಿ ತಟ್ಟಿದ ಪ್ರತಿಭಟನೆಯ ಬಿಸಿ

ಕಳೆದ ಒಂದು ವಾರದಿಂದ ಕೈಲಾಸ ಮಾನಸ ಸರೋವರ ಯಾತ್ರೆಯಲ್ಲಿದ್ದ ಅವರು, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯ ವಿರುದ್ಧ ಕಾಂಗ್ರೆಸ್ ಮತ್ತು ಇನ್ನಿತರ ಬಿಜೆಪಿ ವಿರೋಧೀ ಪಕ್ಷಗಳು ಕರೆದಿರುವ ಬಂದ್ ಗೆ ಬೆಂಬಲ ನೀಡಲು ನವದೆಹಲಿಗೆ ವಾಪಸ್ಸಾದರು.ಯಾಕ್ ಸಾರ್, ಭಾರತ

ಯಾಕ್ ಸಾರ್, ಭಾರತ ಬಂದ್ ಇಲ್ವಾ? ನನ್ನದು ಒಂದೇ ಉತ್ತರ 'ಗೊತ್ತಿಲ್ಲ'!ಯಾಕ್ ಸಾರ್, ಭಾರತ ಬಂದ್ ಇಲ್ವಾ? ನನ್ನದು ಒಂದೇ ಉತ್ತರ 'ಗೊತ್ತಿಲ್ಲ'!

Rahul Gandhi cut shorts his yatra and joins Bharat Bandh in Delhi

ಗಗನಕ್ಕೇರಿರುವ ತೈಲ ಬೆಲೆ ವಿರೋಧಿಸಿ ಕರೆ ನೀಡಿರುವ ಬಂದ್ ಗೆ ದೇಶದಾದ್ಯಂತ ಕಾಂಗ್ರೆಸ್ ಮತ್ತು ಇನ್ನಿತರ ಬಿಜೆಪಿ ವಿರೋಧಿ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸಾಕಷ್ಟು ಬೆಂಬಲ ವ್ಯಕ್ತವಾಗುತ್ತಿದೆ. ಕರ್ನಾಟಕದ ಬಹುಪಾಲು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ದೇಶದೆಲ್ಲೆಡೆ ಸಾರ್ವಜನಿಕ ಸಾರಿಗೆ ಸಂಚಾರ ವ್ಯತ್ಯಯವಾಗುತ್ತಿದೆ. ಜನಜೀವನ ಅಸ್ತವ್ಯಸ್ತವಾಗಿದೆ.

English summary
Delhi: Congress President Rahul Gandhi cut shorts his Kailash Mansarovar Yatra and march from Rajghat towards Ramlila Maidan, to protest against fuel price hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X