ಅತ್ಯುತ್ತಮ ಪ್ರಧಾನಿಯಾಗುವ ಎಲ್ಲಾ ಅರ್ಹತೆ ರಾಹುಲ್ ಗಿದೆ: ತರೂರ್
ನವದೆಹಲಿ, ಮೇ 07: ಒಬ್ಬ ಅತ್ಯುತ್ತಮ ಪ್ರಧಾನಿಯಾಗಲು ಬೇಕಾದ ಎಲ್ಲಾ ಅರ್ಹತೆಯೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗಿದೆ"' ಎಂದು ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅಭಿಪ್ರಾಯ ಪಟ್ಟಿದ್ದಾರೆ.
ರಾಹುಲ್ ಗಾಂಧಿ ಅವರು ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವುದು ದಕ್ಷಿಣದ ಜನರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಲುವಾಗಿ. ದಕ್ಷಿಣ ಭಾರತವನ್ನು ಮೋದಿ ಸರ್ಕಾರ ಕಡೆಗಣಿಸುತ್ತಿದೆ ಎಂಬ ಆರೋಪವಿದೆ. ಆದ್ದರಿಂದಲೇ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳು ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ತರೂರ್ ಹೇಳಿದರು.
"ಕೇಂದ್ರ ಸರ್ಕಾರ ದಕ್ಷಿಣ ಭಾರತದ ರಾಜ್ಯಗಳತ್ತ ಮಲತಾಯಿ ಧೋರಣೆ ತೋರಿಸಿರುವುದಕ್ಕೆ ಹಲವು ನಿದರ್ಶನಗಳಿವೆ. ಆದರೆ ಅಂಥ ನಡೆಯನ್ನು ವಿರೋಧಿಸುವ ಮೊದಲನೇ ಹೆಜ್ಜೆಯಾಗಿ ರಾಹುಲ್ ಗಾಂಧಿ ಅವರು ವಯನಾಡಿನಿಂಡ ಸ್ಪರ್ಧಿಸುತ್ತಿದ್ದಾರೆ. ಯಾವ ರಾಜ್ಯವನ್ನು ಕಡೆಗಣಿಸಬಾರದು, ಎಲ್ಲವನ್ನೂ ಸಮಾನವಾಗಿ ನೋಡಬೇಕು ಎಂಬುದು ಕಾಂಗ್ರೆಸ್ ನಂಬಿರುವ ಸಿದ್ಧಾಂತ" ಎಂದು ತರೂರ್ ಹೇಳಿದರು.

ಕೇರಳದಲ್ಲಿ ಎಷ್ಟೋ ಜನರು ಕೇಂದ್ರ ಸರ್ಕಾರದ ಮೇಲೆ ಮುನಿಸಿಕೊಂಡಿರುವುದಕ್ಕೆ ಇದೇ ಕಾರಣ. ಅವರೆಲ್ಲರಿಗೂ ಕಾಂಗ್ರೆಸ್ ಒಂದು ಪರ್ಯಾಯವಾಗಿ ಕಾಣಿಸಿದೆ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಗೆಲ್ಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications