ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ : ಕಾಂಗ್ರೆಸ್ ಸ್ಪಷ್ಟನೆ

|
Google Oneindia Kannada News

Recommended Video

ರಾಜೀನಾಮೆ ವಿಚಾರವಾಗಿ ಸ್ಪಷ್ಟನೆ ನೀಡಿದ ಕಾಂಗ್ರೆಸ್

ನವದೆಹಲಿ, ಮೇ 25 : ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯ ಪ್ರಸ್ತಾವನೆ ಮುಂದಿಟ್ಟಿರುವುದನ್ನು ಕಾಂಗ್ರೆಸ್ ತಳ್ಳಿಹಾಕಿದೆ.

ರಾಹುಲ್ ಗಾಂಧಿ ಅವರು ಈಗಾಗಲೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯ ನಂತರ ರಣಜಿತ್ ಸುರ್ಜೇವಾಲಾ ಅವರು ಸ್ಪಷ್ಟಪಡಿಸಿದರು.

ತಿರುಗುಬಾಣವಾದ ನೆಗೆಟಿವ್ ಅಭಿಯಾನ, ಕಾಂಗ್ರೆಸ್ಸಿನಲ್ಲಿ ಕೆಂಡ ನಿಗಿನಿಗಿತಿರುಗುಬಾಣವಾದ ನೆಗೆಟಿವ್ ಅಭಿಯಾನ, ಕಾಂಗ್ರೆಸ್ಸಿನಲ್ಲಿ ಕೆಂಡ ನಿಗಿನಿಗಿ

ಶನಿವಾರ ನಡೆಯುತ್ತಿರುವ ಸಭೆಯಲ್ಲಿ ಯುಪಿಎ ಚೇರ್ ಪರ್ಸನ್ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್, ಪ್ರಿಯಾಂಕಾ ವಾದ್ರಾ, ಜ್ಯೋತಿರಾಧಿತ್ಯ ಸಿಂಧಿಯಾ, ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಶೀಲಾ ದೀಕ್ಷಿತ್ ಮುಂದಾದವರು ಭಾಗಿಯಾಗಿದ್ದರು.

Rahul Gandhi has not resigned : Congress leader clarifies

542 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗಳಿಸಿದ್ದು 52 ಸ್ಥಾನಗಳು ಮಾತ್ರ. ದೇಶದ ಅತೀದೊಡ್ಡ ರಾಜ್ಯವಾದ ಮತ್ತು ಗಾಂಧಿ ಕುಟುಂಬದ ತವರು ರಾಜ್ಯವಾದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು 1 ಕ್ಷೇತ್ರದಲ್ಲಿ ಮಾತ್ರ, ಅದೂ ರಾಯ್ ಬರೇಲಿಯಲ್ಲಿ. ಅಮೇಥಿಯಲ್ಲಿ ರಾಹುಲ್ ಗಾಂಧಿ ಸೋತಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎನ್ಡಿಎ 353 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ.

ರಾಹುಲ್ ಗಾಂಧಿ ಹೀನಾಯ ಸೋಲಿಗೆ 10 ಪ್ರಮುಖ ಕಾರಣಗಳುರಾಹುಲ್ ಗಾಂಧಿ ಹೀನಾಯ ಸೋಲಿಗೆ 10 ಪ್ರಮುಖ ಕಾರಣಗಳು

ಸೋಲಿನ ಪರಾಮರ್ಶೆ : ಚುನಾವಣೆಯ ಸೋಲಿನ ಪರಾಮರ್ಶೆ ಮಾಡಲೆಂದು ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಸೇರಿದ್ದರು. ಮೇ 23ರಂದೇ ಕಾಂಗ್ರೆಸ್ ಹೀನಾಯ ಸೋಲು ಕಾಣುತ್ತಿದ್ದಂತೆ ರಾಹುಲ್ ಗಾಂಧಿ ಅವರು ರಾಜೀನಾಮೆಯ ಮಾತಾಡಿದ್ದಾರೆ ಎಂದು ಕೇಳಿಬಂದಿತ್ತು. ಬಲ್ಲ ಮೂಲಗಳ ಪ್ರಕಾರ, ರಾಜೀನಾಮೆಗೆ ರಾಹುಲ್ ಅವರು ನಿರ್ಧರಿಸಿದರೂ ಸೋನಿಯಾ ಗಾಂಧಿ ಮತ್ತು ಪಕ್ಷದ ಇತರ ನಾಯಕರು ಅದನ್ನು ತಿರಸ್ಕರಿಸಿದ್ದಾರೆ. ಅವರೇ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀನಾಮೆ ಪರ್ವ : ಹಲವಾರು ರಾಜ್ಯಗಳಲ್ಲಿ ಸೋಲಿನ ಹೊಣೆ ಹೊತ್ತು ಹಲವಾರು ನಾಯಕರು ಈಗಾಗಲೆ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಪ್ರಚಾರದ ಉಸ್ತುವಾರಿ ವಹಿಸಿದ್ದ ಎಚ್ ಕೆ ಪಾಟೀಲ, ಉತ್ತರ ಪ್ರದೇಶದಲ್ಲಿ ರಾಜ್ ಬಬ್ಬರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

2014ರಲ್ಲಿಯೂ ರಾಜೀನಾಮೆ : 2014ರ ಲೋಕಸಭಾ ಚುನಾವಣೆಯಲ್ಲಿ ಕೇವಲ 44 ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷರಾಗಿ ಪ್ರಚಾರದ ಉಸ್ತುವಾರಿ ವಹಿಸಿದ್ದ ರಾಹುಲ್ ಗಾಂಧಿ ಅವರು ಅಂದು ಕೂಡ ಸೋಲಿನ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲು ಮುಂದಾಗಿದ್ದರು. ಆದರೆ, ನೆಹರೂ ಮತ್ತು ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದ ನಾಯಕರನೇಕರು ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರು.

English summary
Congress president Rahul Gandhi has not offered to resign : Congress leader clarified in the Congress Working Committee, which met to introspect defeat in Lok Sabha Elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X