ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಮ್ಸ್ ಆಸ್ಪತ್ರೆಯಲ್ಲಿ ಲಾಲೂ ಪ್ರಸಾದ್-ರಾಹುಲ್ ಗಾಂಧಿ ಭೇಟಿ

|
Google Oneindia Kannada News

ನವದೆಹಲಿ, ಏಪ್ರಿಲ್ 30: ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್(All India Institutes of Medical Sciences) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಿದರು.

ಅವರ ಆರೋಗ್ಯ ವಿಚಾರಿಸುವ ಸಲುವಾಗಿ ರಾಹುಲ್ ಗಾಂಧಿ ಏಮ್ಸ್ ಗೆ ಭೇಟಿ ನೀಡಿದ್ದು, ಉಭಯ ನಾಯಕರ ಭೇಟಿಗೆ ವಿಶೇಷ ಅರ್ಥವೇನೂ ಇಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಮೇವು ಹಗರಣ: 4 ನೇ ಪ್ರಕರಣದಲ್ಲಿ ಲಾಲೂಗೆ 7 ವರ್ಷ ಜೈಲುಮೇವು ಹಗರಣ: 4 ನೇ ಪ್ರಕರಣದಲ್ಲಿ ಲಾಲೂಗೆ 7 ವರ್ಷ ಜೈಲು

ಬಹುಕೋಟಿ ಮೇವು ಹಗರದಣದ ಆರೋಪಿಯಾಗಿರುವ ಲಾಲೂ ಪ್ರಸಾದ್ ಯಾದವ್ ಜಾರ್ಖಂಡ್ ನ ರಾಂಚಿಯ ಬಿಸ್ರಾ ಮುಂಡಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

Rahul Gandhi meets Lalu Prasad at Delhis AIIMS

ಕಿಡ್ನಿ ಮತ್ತು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮೊದಲು ರಾಂಚಿಯ ರಾಜೇಂದ್ರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ತಮಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಅವರು ನೀಡಿದ ದೂರಿನನ್ವಯ ಅವರಿನ್ನು ಏಮ್ಸ್ ಗೆ ದಾಖಲಿಸಲಾಗಿದೆ.

ಮಧುಮೇಹ ಪ್ರಮಾಣ ಹೆಚ್ಚುತ್ತಿರುವುದರಿಂದ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.

English summary
Congress President Rahul Gandhi on Monday met Rashtriya Janata Dal (RJD) chief Lalu Prasad, who is undergoing treatment for various ailments related to heart and kidney at All India Institutes of Medical Sciences (AIIMS) in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X