• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿದೇಶ ಪ್ರವಾಸಕ್ಕೆ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

|

ನವದೆಹಲಿ, ಡಿಸೆಂಬರ್ 28: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ,ರಾಹುಲ್ ಗಾಂಧಿ ಸಣ್ಣ ವಿದೇಶ ಪ್ರವಾಸದಲ್ಲಿದ್ದಾರೆ. ಶೀಘ್ರದಲ್ಲೇ ಮರಳಲಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಸುರಿಸಿ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ: ಸ್ಮೃತಿ

ಆದರೆ ರಾಹುಲ್ ಗಾಂಧಿ ಎಲ್ಲಿಗೆ ತೆರಳಿದ್ದಾರೆ ಎಂಬುದರ ಕುರಿತು ಸುರ್ಜೇವಾಲ ಮಾಹಿತಿ ನೀಡಿಲ್ಲ. ಆದರೆ ರಾಹುಲ್ ಗಾಂಧಿ ವಿದೇಶ ಪ್ರವಾಸದ ಕುರಿತು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದ್ದು, ರಾಹುಲ್ ಖಾಸಗಿ ವಿಮಾನದ ಮೂಲಕ ಮಿಲಾನ್ ಗೆ ತೆರಳಿದ್ದು, ಅಲ್ಲಿ ತಮ್ಮ ಅಜ್ಜಿಯನ್ನು ಭೇಟಿ ಮಾಡಲು ತೆರಳಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರ ಅಜ್ಜಿ ಇಟಲಿಯಲ್ಲಿದ್ದಾರೆ.

ದೆಹಲಿಯಲ್ಲಿ ರೈತರು ಪ್ರತಿಭಟನೆ ಸತತ 2ನೇ ತಿಂಗಳಿಗೆ ಕಾಲಿಟ್ಟಿದ್ದು, ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಂಡಿರುವುದು ಕುತೂಹಲ ಕೆರಳಿಸಿದೆ.

ಆದರೆ ಈ ಬಗ್ಗೆ ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿ ವೈಯುಕ್ತಿಕ ವಿದೇಶ ಪ್ರವಾಸದಲ್ಲಿದ್ದಾರೆ. ಶೀಘ್ರವೇ ದೇಶಕ್ಕೆ ಮರಳಲಿದ್ದಾರೆ ಎಂದು ಹೇಳಿದೆ. ಅಂತೆಯೇ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದರಿಂದ ಅವರು ಕಾಂಗ್ರೆಸ್ ಪಕ್ಷ ಸಂಸ್ಥಾಪನಾ ದಿನದ ಕಾರ್ಯಕ್ರಮಕ್ಕೂ ಗೈರಾಗಲಿದ್ದಾರೆ ಎಂದು ಹೇಳಲಾಗಿದೆ.

English summary
Congress leader Rahul Gandhi is on a personal visit abroad and will be absent for the 136th foundation day of the party on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X