• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ ಪರಿಸ್ಥಿತಿಯನ್ನು ರಾಹುಲ್ ರಾಜಕಾರಣಕ್ಕೆ ಬಳಸುತ್ತಿದ್ದಾರೆ: ಸಂಬಿತ್ ಪಾತ್ರಾ

|
Google Oneindia Kannada News

ನವದೆಹಲಿ, ಜೂನ್ 22: ಕೋವಿಡ್ ಪರಿಸ್ಥಿತಿಯನ್ನು ರಾಹುಲ್ ಗಾಂಧಿ ರಾಜಕಾರಣಕ್ಕೆ ಬಳಸುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ದೂರಿದ್ದಾರೆ.

ಕೇಂದ್ರ ಸರ್ಕಾರ ಕೋವಿಡ್ ಪಿಡುಗನ್ನು ನಿರ್ವಹಣೆ ಮಾಡಿದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ವೇತಪತ್ರ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದೆ.

ಕೊರೊನಾ ನಿರ್ವಹಣೆ ಕುರಿತು ಶ್ವೇತಪತ್ರ ಹೊರಡಿಸಿದ ರಾಹುಲ್ ಗಾಂಧಿಕೊರೊನಾ ನಿರ್ವಹಣೆ ಕುರಿತು ಶ್ವೇತಪತ್ರ ಹೊರಡಿಸಿದ ರಾಹುಲ್ ಗಾಂಧಿ

ಸೋಮವಾರ ನಮಗೆ ಮಹತ್ವದ ದಿನ, ವಿಶ್ವದಲ್ಲಿ ಒಂದೇ ದಿನದಲ್ಲಿ ಕೋವಿಡ್ ಲಸಿಕೆಯ 87 ಡೋಸ್‌ಗಳನ್ನು ನೀಡಿದ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.

ಜನರೂ ಕೂಡ ಈ ಸಾಧನೆಯನ್ನು ಸಂಭ್ರಮಿಸಿದ್ದಾರೆ. ಇಂದು ರಾಹುಲ್ ಗಾಂಧಿ ಅವರು ಶ್ವೇತಪತ್ರ ಬಿಡುಗಡೆ ಮಾಡಿ, ಈ ಸಂಭ್ರಮ ಕಸಿಯುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ಹೇಳಿದ್ದೇನು?: ಕೇಂದ್ರ ಸರ್ಕಾರದ ಕೊರೊನಾ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ವೇತಪತ್ರ ಹೊರಡಿಸಿದ್ದಾರೆ.ದೆಹಲಿಯಲ್ಲಿ ನಡೆದ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆಯ ಕುರಿತು ಶ್ವೇತಪತ್ರ ವನ್ನು ಬಿಡುಗಡೆ ಮಾಡಿದರು.

ಕೇಂದ್ರ ಸರ್ಕಾರದ ನಿರ್ವಹಣೆಯನ್ನು ಘೋರವಾದ ಮತ್ತು ಹಾನಿಕಾರ ಎಂದು ಶ್ವೇತ ಪತ್ರದಲ್ಲಿ ಅಭಿಪ್ರಾಯಪಡಲಾಗಿದ್ದು, ಕನಿಷ್ಟ ಪಕ್ಷ ಈಗ ಮೂರನೇ ಅಲೆಗೆ ಸಿದ್ಧತೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೋವಿಡ್ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ವೇತಪತ್ರ ಹೊರಡಿಸಿದ್ದು, ಘೋರ ಮತ್ತು ಹಾನಿಕಾರಕ ಎಂದು ಹೇಳಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಏನು ತಪ್ಪಾಗಿದೆ ಎಂಬುದರ ಕುರಿತು ಸರ್ಕಾರಕ್ಕೆ ಮಾಹಿತಿ ಮತ್ತು ಒಳನೋಟಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದ ರಾಹುಲ್ ಗಾಂಧಿ, 'ಈ ಶ್ವೇತಪತ್ರದ ಗುರಿ ಸರ್ಕಾರದತ್ತ ಬೆರಳು ತೋರಿಸುವುದಲ್ಲ, ಆದರೆ ರಾಷ್ಟ್ರದ ಮೂರನೇ ಅಲೆಗೆ ಸಿದ್ಧವಾಗಲು ಸಹಾಯ ಮಾಡುವುದು ಎಂದರು.

ಇದೇ ವೇಳೆ ಕೋವಿಡ್ ವಿರುದ್ಧ ಹೋರಾಟದಲ್ಲಿ ನಮ್ಮ ಬಳಿ ಇರುವ ಏಕೈಕ ಪ್ರಮುಖ ಅಸ್ತ್ರ ಎಂದರೆ ಅದು ಕೋವಿಡ್ ಲಸಿಕೆ ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ, ನಾವು ಸಾಧ್ಯವಾದಷ್ಟು ಬೇಗ ಶೇಕಡಾ 100 ರಷ್ಟು ವ್ಯಾಕ್ಸಿನೇಷನ್ ಪೂರೈಸಬೇಕು.

English summary
The BJP on Tuesday accused Rahul Gandhi of playing politics over the coronavirus crisis after the Congress leader released a “white paper" on the Centre’s handling of the pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X