'ರಫೇಲ್ ರಾದ್ಧಾಂತದ ತನಿಖೆಯಾದರೆ ಮೋದಿ ಕತೆ ಅಷ್ಟೇ ಎಂದ ರಾಹುಲ್!'
ನವದೆಹಲಿ, ನವೆಂಬರ್ 02: ರಫೇಲ್ ಒಪ್ಪಂದದಲ್ಲಿ ನಡೆದ ಅವ್ಯವಹಾರದ ಕುರಿತು ಚರ್ಚೆಯೇನಾದರೂ ಆದರೆ ನರೇಂದ್ರ ಮೋದಿ ಅಧಿಕಾರ ಕಳೆದುಕೊಳ್ಳುವುದು ಖಂಡಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನವದೆಹಲಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರಫೇಲ್ ಒಪ್ಪಂದದ ಕುರಿತಂತೆ ಮೋದಿ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡರು.
ಅನಿಲ್ ಅಂಬಾನಿಯವರಿಗೆ 30000 ಕೋಟಿ ರೂ.ಗಳನ್ನು ನೀಡಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮಾಡಿದ 'ಡೀಲ್' ಇದು ಎಂದು ರಾಹುಲ್ ಗಾಂಧಿ ಆರೋಪಿಸಿದರು.
ರಾಹುಲ್ ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು ಇಲ್ಲಿವೆ...

ಮೋದಿ ಅಂಬಾನಿ ಪಾಲುದಾರಿಕೆ!
ರಫೇಲ್ ಡೀಲ್ ಎಂಬುದು ಸಂಪೂರ್ಣವಾಗಿ ನರೇಂದ್ರ ಮೋದಿ ಮತ್ತು ಅನಿಲ್ ಅಂಬಾನಿ ಅವರ ಪಾಲುದಾರಿಕೆಯ ಹಗರಣವಷ್ಟೇ. ಯಾವ ದೇಶಕ್ಕೂ ಸಂಬಂಧಿಸಿದ್ದಲ್ಲ! ಡಸಾಲ್ಟ್ ಕಂಪನಿಯು ರಿಲಯನ್ಸ್ ಕಂಪನಿಗೆ ಮೊದಲ ಇನ್ ಸ್ಟಾಲ್ ಮೆಂಟ್ ಎಂಬಂತೆ 284 ಕೋಟಿ ರೂ.ಗಳ ಕಿಕ್ ಬ್ಯಾಕ್ ನೀಡಿದೆ- ರಾಹುಲ್ ಗಾಂಧಿ

ತನಿಖೆಯಾದರೆ....
ಅಕಸ್ಮಾತ್ ರಫೇಲ್ ಡಿಲ್ ಕುರಿತು ಸರಿಯಾದ ತನಿಖೆ ನಡೆದರೆ ಮೋದಿ ಮನೆಗೆ ಹೋಗುವುದು ಖಂಡಿತ! ನಾನು ವಿಶ್ವಾಸದಿಂದ ಹೇಳಬಲ್ಲೆ! ಒಂದು ಭ್ರಷ್ಟಾಚಾರಕ್ಕಾಗಿ ಮತ್ತು ಅನಿಲ್ ಅಂಬಾನಿಯವರಿಗೆ ಈ ವ್ಯವಹಾರಕ್ಕಾಗಿ 30000 ಕೋಟಿ ರೂ.ಗಳನ್ನು ನೀಡಿದ್ದಕ್ಕಾಗಿ ಮೋದಿ ಅಧಿಕಾರ ಕಳೆದುಕೊಳ್ಳುತ್ತಾರೆ- ರಾಹುಲ್ ಗಾಂಧಿ

ಏನಿದು ರಫೇಲ್ ಡೀಲ್?
ಯುದ್ಧ ವಿಮಾನ ಖರೀದಿಗಾಗಿ ಫ್ರಾನ್ಸ್ ಸರ್ಕಾರದೊಂದಿಗೆ ಭಾರತ ಮಾಡಿಕೊಂಡ ಒಪ್ಪಂದವೇ ರಫೇಲ್ ಡೀಲ್. ಈ ಡೀಲ್ ನಲ್ಲಿ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ರಫೇಲ್ ಯುದ್ಧ ವಿಮಾನಗಳ ಬಿಡಿ ಭಾಗಗಳ ತಯಾರಿಕೆಯ ಹೊಣೆಯನ್ನು ಎಚ್ ಎಎಲ್ ಗೆ ಬದಲಾಗಿ ರಿಲಯನ್ಸ್ ಇಂಡಸ್ಟ್ರೀಸ್ ಗೆ ನೀಡಿದ್ದು ಸಾಕಷ್ಟು ವಿವಾದ ಸೃಷ್ಟಿಸಿದೆ.

ಸಿಬಿಐ ವಿವಾದಕ್ಕೂ ರಫೇಲ್ ನಂಟು!
ಇತ್ತೀಚೆಗೆ ಸಿಬಿಐ ನಿರ್ದೇಶಕ ಮತ್ತು ವಿಶೇಷ ನಿರ್ದೇಶಕರಾದ ಅಲೋಕ್ ವರ್ಮಾ ಮತ್ತು ತಾಕೇಶ್ ಆಸ್ಥಾನ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ್ದು ಸಹ ರಫೇಲ್ ಡೀಲ್ ನೊಂದಿಗೆ ನಂಟು ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ರಫೇಲ್ ಡಿಲ್ ಗೆ ಸಂಬಂಧಿಸಿದಂತೆ ತನುಖೆ ನಡೆಸುತ್ತಿದ್ದ ಕಾರಣದಿಂದಲೇ ನಿರ್ದೇಶಕರನ್ನು ರಜೆಯ ಮೇಲೆ ಕಳಿಸಲಾಗಿದೆ ಎಂದು ಕಾಂಗ್ರೆಸ್ ದೂರಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications