ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಬಗ್ಗೆ ಇದೆಂಥಾ 'ರಾಗಾ'?
ನವದೆಹಲಿ, ಮಾರ್ಚ್.11: ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಗೆ ಗುಡ್ ಬಾಯ್ ಹೇಳಿದ ಜ್ಯೋತಿರಾದಿತ್ಯ ಸಿಂಧಿಯಾ ಬಗ್ಗೆ ರಾಹುಲ್ ಮಾತನಾಡಿದ್ದಾರೆ.
ನಮ್ಮ ಮನೆಗೆ ಪೂರ್ವಾನುಮತಿ ಇಲ್ಲದೇ ಪ್ರವೇಶಿಸುತ್ತಿದ್ದ ನಾಯಕರ ಪೈಕಿ ಜ್ಯೋತಿರಾದಿತ್ಯ ಸಿಂಧಿಯಾ ಕೂಡಾ ಒಬ್ಬರಾಗಿದ್ದರು. ತಮ್ಮೊಂದಿಗೆ ಸಿಂಧಿಯಾ ಅಷ್ಟು ಆಪ್ತರಾಗಿದ್ದರು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ : ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ
ಮಂಗಳವಾರ ಕಾಂಗ್ರೆಸ್ ಪಕ್ಷ ತೊರೆದಿದ್ದ ಮಧ್ಯಪ್ರದೇಶದ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷ ಬಿಟ್ಟಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸಿಂಧಿಯಾ ಜೊತೆ 19 ಶಾಸಕರ ರಾಜೀನಾಮೆ:
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅಪ್ತರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷದಲ್ಲಿ ಭರವಸೆ ಮೂಡಿಸಿದ್ದ ಯುವ ನಾಯಕರಾಗಿದ್ದರು. ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆಯುತ್ತಿದ್ದಂತೆ ಮಧ್ಯಪ್ರದೇಶದ 19 ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.