ಬಹುಭಾಷೆ ಭಾರತದ ದೌರ್ಬಲ್ಯವಲ್ಲ: ಹಿಂದಿ ಹೇರಿಕೆ ಬಗ್ಗೆ ರಾಹುಲ್ ಗಾಂಧಿ

Recommended Video

      ಹಿಂದಿ ಹೇರಿಕೆ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು ? | Rahul Gandhi

      ನವದೆಹಲಿ, ಸೆಪ್ಟೆಂಬರ್ 17: ಬಹುಭಾಷಾ ನೀತಿ ಭಾರತದ ದೌರ್ಬಲ್ಯವಲ್ಲ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

      ಹಿಂದಿ ಹೇರಿಕೆ ಬಗ್ಗೆ ಎಲ್ಲೆಲ್ಲೂ ಅಪಸ್ವರ ಕೇಳಿಬರುತ್ತಿರುವ ಸಂದರ್ಭದಲ್ಲಿ ಭಾರತದ 23 ಭಾಷೆಗಳನ್ನು ನೆನೆದು ಟ್ವೀಟ್ ಮಾಡಿರು ರಾಹುಲ್ ಗಾಂಧಿ, "ಭಾರತದ ವಿವಿಧ ಭಾಷೆಗಳು ಅದರ ದೌರ್ಬಲ್ಯವಲ್ಲ" ಎಂದಿದ್ದಾರೆ. ಈ ಮೂಲಕ ಹಿಂದಿ ಹೇರಿಕೆಯ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿದರು.

      Rahul Gandhis Tweet on Hindi Imposition

      ಸೆಪ್ಟೆಂಬರ್ 14 ರಂದು ಹಿಂದಿ ದಿವಸ್ ಆಚರಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, "ಒಂದು ದೇಶ, ಒಂದೇ ಭಾಷೆ" ಎಂಬ ಪರಿಕಲ್ಪನೆಯ ಬಗ್ಗೆ ಮಾತನಾಡಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು. ದಕ್ಷಿಣ ಭಾರತದ ಕೆಲವು ರಾಜ್ಯಗಳು ಹಿಂದಿ ಹೇರಿಕೆಯನ್ನು ಕಟುವಾಗಿ ವಿರೋಧಿಸಿದ್ದವು.

      ಕರ್ನಾಟಕದಲ್ಲೂ ಹಿಂದಿ ಹೇರಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮೌನವಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಟ್ವೀಟ್ ಮೂಲಕ ತಮ್ಮ ನಿಲುವನ್ನು ತಿಳಿಸಿದ್ದಾರೆ.

      "ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ‌ ಯಾವುದೇ ತಾರತಮ್ಯ ಸಲ್ಲದು‌. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷಾ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ" ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+