ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ನಕಲಿ ಹಿಂದೂಗಳು ಎಂದ ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 15: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಕಲಿ ಹಿಂದೂಗಳು ಎಂದು ಕರೆದಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಕಲಿ ಹಿಂದೂಗಳು, ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.

'ನಾನು ಕಾಶ್ಮೀರಿ ಪಂಡಿತ, ಮನೆಯಲ್ಲಿದಂತಹ ಭಾವ': ವೈಷ್ಣೋ ದೇವಿ ದೇಗುಲ ಭೇಟಿ ಬಳಿಕ ರಾಹುಲ್‌'ನಾನು ಕಾಶ್ಮೀರಿ ಪಂಡಿತ, ಮನೆಯಲ್ಲಿದಂತಹ ಭಾವ': ವೈಷ್ಣೋ ದೇವಿ ದೇಗುಲ ಭೇಟಿ ಬಳಿಕ ರಾಹುಲ್‌

ಲಕ್ಷ್ಮಿ ದೇವಿಯು ಒಬ್ಬರ ಗುರಿ ಸಾಧಿಸಲು ಸಹಾಯ ಮಾಡುತ್ತಾರೆ. ದುರ್ಗಾ ದೇವಿಯು ರಕ್ಷಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ.

Rahul Gandhi Says BJP And RSS Fake Hindus

"ಅವರು ಯಾವ ರೀತಿಯ ಹಿಂದುಗಳು? ಅವರು ನಕಲಿ ಹಿಂದುಗಳು. ಅವರು ಹಿಂದೂ ಧರ್ಮವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ಧರ್ಮದ ದಲ್ಲಾಳಿಗಳು, ಆದರೆ ಅವರು ಹಿಂದುಗಳಲ್ಲ" ಎಂದು ರಾಹುಲ್ ಗಾಂಧಿ ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್‌ನ ಸಿದ್ಧಾಂತವು ಬಿಜೆಪಿ-ಆರ್‌ಎಸ್‌ಎಸ್‌ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಮತ್ತು ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಲ್ಲದು ಎಂದರು.

ಮಹಾತ್ಮ ಗಾಂಧಿ ಅವರ ಚಿತ್ರವನ್ನು ನೀವು ನೋಡಿದರೆ, ಅವರ ಸುತ್ತಲೂ 2-3 ಮಹಿಳೆಯರು ಇರುವುದನ್ನು ಕಾಣುತ್ತೀರಿ. ಮೋಹನ್ ಭಾಗವತ್ (ಆರೆಸ್ಸೆಸ್ ಮುಖ್ಯಸ್ಥ) ಹೀಗೆ ಯಾವುದಾದರೂ ಮಹಿಳೆ ಜತೆಗೆ ಇರುವ ಚಿತ್ರವನ್ನು ನೋಡಿದ್ದೀರಾ? ಇದು ಏಕೆಂದರೆ, ಅವರ ಸಂಘಟನೆಯು ಮಹಿಳೆಯರನ್ನು ಶೋಷಿಸುತ್ತದೆ.

ಮತ್ತು ನಮ್ಮ ಸಂಘಟನೆ ಅವರಿಗೆ ವೇದಿಕೆ ಕಲ್ಪಿಸುತ್ತದೆ. ಮೋದಿ-ಆರೆಸ್ಸೆಸ್ ಯಾವುದೇ ಮಹಿಳೆಯನ್ನು ದೇಶದ ಪ್ರಧಾನಿಯನ್ನಾಗಿ ಮಾಡಿಲ್ಲ. ಕಾಂಗ್ರೆಸ್ ಮಾಡಿತ್ತು ಎಂದಿದ್ದಾರೆ.

ತಮ್ಮದು ಹಿಂದೂ ಪಕ್ಷ ಎಂದು ಬಿಜೆಪಿ ಹಾಗೂ ಆರೆಸ್ಸೆಸ್ ಹೇಳುತ್ತಿವೆ. ಕಳೆದ 100-200 ವರ್ಷಗಳಲ್ಲಿ ಹಿಂದೂ ಧರ್ಮವನ್ನು ಚೆನ್ನಾಗಿ ಅರ್ಥಮಾಡಿಕೊಂಡು ಮತ್ತು ಅಭ್ಯಾಸಮಾಡಿದವರೆಂದರೆ ಅದು ಮಹಾತ್ಮ ಗಾಂಧಿ. ನಾವು ಅದನ್ನು ಗುರುತಿಸಿದ್ದೇವೆ, ಹಾಗೆಯೇ ಬಿಜೆಪಿ ಮತ್ತು ಆರೆಸ್ಸಿಗರು ಕೂಡ ಎಂದಿದ್ದಾರೆ.

ಮಹಾತ್ಮ ಗಾಂಧಿ ಅವರು ತಮ್ಮ ಇಡೀ ಜೀವನವನ್ನು ಹಿಂದೂ ಧರ್ಮವನ್ನು ಅರ್ಥಮಾಡಿಕೊಳ್ಳಲು ಮುಡಿಪಾಗಿಟ್ಟಿದ್ದರೆ ಗೋಡ್ಸೆ ಏಕೆ ಅವರನ್ನು ಕೊಲ್ಲಬೇಕಿತ್ತು? ಇದು ಒಂದು ವಿರೋಧಾಭಾಸ. ಇದರ ಬಗ್ಗೆ ನೀವು ಯೋಚಿಸಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಸಿದ್ಧಾಂತಗಳು ಬಿಜೆಪಿ-ಆರೆಸ್ಸೆಸ್ ಸಿದ್ಧಾಂತಕ್ಕೆ ಸಂಪೂರ್ಣ ತದ್ವಿರುದ್ಧವಾಗಿದೆ. ದೇಶವನ್ನು ಎರಡರಲ್ಲಿ ಒಂದು ಸಿದ್ಧಾಂತ ಮಾತ್ರ ಆಳಬಹುದಾಗಿದೆ ಎಂದು ಹೇಳಿದ್ದಾರೆ.

English summary
Congress leader Rahul Gandhi on Wednesday attacked the BJP and RSS, alleging that they were "fake Hindus" who use religion for their benefit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X