ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ರೇಪ್ ಇನ್ ಇಂಡಿಯಾ' ಹೇಳಿಕೆಗೆ ಕ್ಷಮೆ ಯಾಚಿಸಲ್ಲ ಎಂದ ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ ಡಿಸೆಂಬರ್ 13: 'ರೇಪ್ ಇನ್ ಇಂಡಿಯಾ' ಹೇಳಿಕೆಗೆ ಕ್ಷಮೆ ಯಾಚಿಸುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇಂದು ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೇಪ್ ಇನ್ ಇಂಡಿಯಾ ಹೇಳಿಕೆ ಕುರಿತು ಚರ್ಚೆ ನಡೆಯಿತು. ಇತಿಹಾಸದಲ್ಲೇ ಮೊದಲ ಬಾರಿಗೆ ನಾಯಕರೊಬ್ಬರು ಭಾರತೀಯ ಮಹಿಳೆ ಮೇಲೆ ಅತ್ಯಾಚಾರವೆಸಗಬೇಕು ಎಂದು ಕರೆ ನೀಡಿದ್ದಾರೆ.

ಭಾರತ ಈಗ ಅತ್ಯಾಚಾರದ ರಾಜಧಾನಿಯಾಗಿದೆ: ರಾಹುಲ್ ಗಾಂಧಿಭಾರತ ಈಗ ಅತ್ಯಾಚಾರದ ರಾಜಧಾನಿಯಾಗಿದೆ: ರಾಹುಲ್ ಗಾಂಧಿ

ದೇಶದ ಜನರಿಗೆ ರಾಹುಲ್ ಗಾಂಧಿ ಅವರು ನೀಡುತ್ತಿರುವ ಸಂದೇಶವೇನು ರಾಹುಲ್ ಗಾಂಧಿ ಕೂಡಲೇ ಕ್ಷಮೆ ಕೇಳಬೇಕು ಎಂದು ಸಚಿವೆ ಸ್ಮೃತಿ ಇರಾನಿ ಪಟ್ಟು ಹಿಡಿದರು.

Rahul Gandhi Says Wont Apologise

ಆದರೆ ಯಾವುದೇ ಕಾರಣಕ್ಕೂ ನಾನು ಹೇಳಿಕೆಯನ್ನು ಹಿಂಪಡೆಯುವುದಿಲ್ಲ, ಕ್ಷಮೆಯನ್ನೂ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಯುವತಿ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆ ಮಾಡಿದ್ದರ ಬಗ್ಗೆ ಉಲ್ಲೇಖಿಸಿದ್ದ ಅವರು ದೇಶದಲ್ಲಿ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋಸಿ ವಿರುದ್ಧ ಟೀಕಿಸಿದ್ದರು. ನರೇಂದ್ರ ಮೋದಿ 'ಮೇಕ್‌ ಇನ್ ಇಂಡಿಯಾ' ಎಂದು ಹೇಳಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ 'ರೇಪ್ ಇನ್ ಇಂಡಿಯಾ' ಆಗಿದೆ ಎಂದು ಟೀಕಿಸಿದ್ದರು.ರಾಹುಲ್ ಗಾಂಧಿ ಕ್ಷಮೆ ಕೇಳಬೇಕು ಎಂದು ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರು ಘೋಷಣೆಗಳನ್ನು ಕೂಗಿದ್ದಾರೆ. ರಾಹುಲ್‌ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿಎಂಕೆ ನಾಯಕಿ ಕನಿಮೋಳಿ, "ಪ್ರಧಾನಿ 'ಮೇಕ್ ಇನ್ ಇಂಡಿಯಾ' ಎಂದು ಹೇಳಿದರು.

ನಾವು ಅದನ್ನು ಗೌರವಿಸುತ್ತೇವೆ. ಆದರೆ ದೇಶದಲ್ಲಿ ಏನು ನಡೆಯುತ್ತಿದೆ? ಅದನ್ನೇ ರಾಹುಲ್ ಗಾಂಧಿ ಹೇಳಲು ಉದ್ದೇಶಿಸಿದ್ದರು. ದುರದೃಷ್ಟವಶಾತ್ ಮೇಕ್ ಇನ್ ಇಂಡಿಯಾ ನಡೆಯುತ್ತಿಲ್ಲ ಮತ್ತು ದೇಶದ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದು ಒಂದು ಕಳವಳವಕಾರಿ ಘಟನೆ," ಎಂದರು.

English summary
"I won't apologise... Let me clarify what I said. I said the PM keeps talking about Make In India.So when one opens the newspaper one hoped that one would see news about it, but what do we see when we open the papers? We see so many cases of rapes.says Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X