ಮೋದಿಜೀ ಸಾಮಾಜಿಕ ಜಾಲತಾಣವನ್ನಲ್ಲ, ದ್ವೇಷವನ್ನು ಬಿಡಿ : ರಾಹುಲ್ ಗಾಂಧಿ
ನವದೆಹಲಿ, ಮಾರ್ಚ್ 2: ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣಗಳಿಂದ ದೂರವಾಗುತ್ತಿರುವ ವಿಚಾರವನ್ನು ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಕಾಲೆಳೆಯುವ ಪ್ರಯತ್ನವನ್ನೂ ಮಾಡಿದ್ದಾರೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಈ ಬಗ್ಗೆ ಟ್ವೀಟ್ ಮಾಡಿದ್ದು, 'ದ್ವೇಷವನ್ನು ಬಿಡಿ, ಸಾಮಾಜಿಕ ಜಾಲತಾಣವನ್ನಲ್ಲ' ಎಂದು ಹೇಳಿದ್ದಾರೆ.
ಇದಲ್ಲದೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಟ್ವೀಟ್ ಮಾಡಿದ್ದು, ನೀವು ಸಾಮಾಜಿಕ ಜಾಲತಾಣಗಳಿಂದ ದೂರವಾಗುವ ಅಗತ್ಯವಿಲ್ಲ. ಬದಲಾಗಿ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷವನ್ನು ಸಾರುತ್ತಿರುವವರಿಗೆ ಸಾಮಾಜಿಕ ಜಾಲತಾಣಗಳಿಂದ ದೂರವಿರಿ ಎಂಬ ಸಲಹೆ ನೀಡಿ ಎಂದು ಹೇಳಿದ್ದಾರೆ.

ಇವೆರಡೂ ಟ್ವೀಟ್‌ಗಳನ್ನು ಕಾಂಗ್ರೆಸ್‌ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ರೀ ಟ್ವೀಟ್ ಮಾಡಲಾಗಿದೆ. ಒಟ್ಟಾರೆ ನರೇಂದ್ರ ಮೋದಿಯವರ ಸಾಮಾಜಿಕ ಜಾಲತಾಣಗಳಿಂದ ದೂರವಾಗುವ ನಿರ್ಧಾರವು ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಗದ್ದಲವನ್ನೇ ಸೃಷ್ಟಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರಕ್ಕೆ ಕಾರಣವೇನೆಂಬುದರ ಬಗ್ಗೆ ವಿಭಿನ್ನವಾದ ಚರ್ಚೆಗಳು ನಡೆಯುತ್ತಿವೆ.












Click it and Unblock the Notifications