ಕಾಂಗ್ರೆಸ್ ನಲ್ಲಿ ರಾಹುಲ್ ಶಕೆ ಆರಂಭ

ನವದೆಹಲಿ, ಡಿಸೆಂಬರ್ 16: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿಯವರು ನವದೆಹಲಿಯಲ್ಲಿಂದು(ಡಿ.16) ಅಧಿಕಾರ ಸ್ವೀಕರಿಸಿದ್ದಾರೆ. ಇಷ್ಟು ದಿನ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದ ಸೋನಿಯಾ ಗಾಂಧಿಯವರು ತಮ್ಮ ಪುತ್ರ ರಾಹುಲ್ ಗಾಂಧಿಗೆ ಅಧಿಕಾರ ಹಸ್ತಾಂತರಿಸಿದರು.

ಕಾಂಗ್ರೆಸ್ ಗಣ್ಯರ ಸಮ್ಮುಖದಲ್ಲಿ ಸುಮಾರು 1 ಗಂಟೆಯ ಕಾಲ ನಡೆದ ಔಪಚಾರಿಕ ಸಮಾರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನ ಹಾಲಿ, ಮಾಜಿ ಮುಖ್ಯಮಂತ್ರಿಗಳು, ಗಣ್ಯರು, ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಜರಿದ್ದರು.

Rahul Gandhi takes charge as Congress President in Delhi

19 ವರ್ಷಗಳ ಕಾಲ ಕಾಂಗ್ರೆಸ್ ಅನ್ನು ಮುನ್ನಡೆಸಿದ್ದ 70 ವರ್ಷ ವಯಸ್ಸಿನ ಸೋನಿಯಾ ಗಾಂಧಿ, 47 ವರ್ಷದ ತಮ್ಮ ಪುತ್ರ ಮತ್ತು ಇಷ್ಟು ದಿನ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನದಲ್ಲಿದ್ದ ರಾಹುಲ್ ಗಾಂಧಿಯವರಿಗೆ ಪ್ರಮಾಣಪತ್ರ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಈ ಹಿಂದೆ ಮೋತಿಲಾಲ್ ನೆಹರೂ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಂತರ ಜವಹರ್ ಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ದೀರ್ಘ ಅವಧಿಗೆ ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಇದೀಗ ರಾಹುಲ್ ಗಾಂಧಿ ಸರದಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+