ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿಯ ದೈನಂದಿನ 5 ಕೆಲಸಗಳನ್ನು ಪಟ್ಟಿ ಮಾಡಿದ ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ, ಮಾರ್ಚ್ 30: ಅನಿಯಂತ್ರಿತ ಹಣದುಬ್ಬರ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ.

ಹಣದುಬ್ಬರ ಹೆಚ್ಚಿಸುವುದು, ರೈತರ ವಿರುದ್ಧ ನಿರ್ಧಾರಗಳನ್ನು ಕೈಗೊಳ್ಳುವುದು ಮತ್ತು ಸರ್ಕಾರಿ ಆಸ್ತಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದು ಪ್ರಧಾನಿಗೆ ಸುಲಭವಾಗಿದೆ ಎಂದು ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಹುಲ್ ಅತ್ಯಂತ ಕಠಿಣ ಪ್ರಶ್ನೆಗಳನ್ನು ಕೇಳಿದ್ದಾರೆ.

ಬುಧವಾರ ತಮ್ಮ ಟ್ವೀಟ್‌ನಲ್ಲಿ ರಾಹುಲ್ ಗಾಂಧಿ ಬರೆದಿದ್ದಾರೆ.

ಪ್ರಧಾನ ಮಂತ್ರಿಗಳ ದೈನಂದಿನ ಕೆಲಸದ ಪಟ್ಟಿ

Rahul Gandhi targets PM Modi over rising inflation in the country; says PMs Daily Work

1. ನಾನು ಪೆಟ್ರೋಲ್-ಡೀಸೆಲ್-ಗ್ಯಾಸ್ ದರವನ್ನು ಎಷ್ಟು ಹೆಚ್ಚಿಸಬೇಕು,

2. ಜನರ 'ಚಾ ಪೇ ಚರ್ಚಾ'ವನ್ನು ಹೇಗೆ ನಿಲ್ಲಿಸಬೇಕು,

3. ಯುವಕರಿಗೆ ಉದ್ಯೋಗ ಒದಗಿಸುವುದು ಬಿಟ್ಟು, ಪೊಳ್ಳು ಕನಸುಗಳನ್ನು ತೋರಿಸುವುದು ಹೇಗೆ?

4. ನಾನು ಇಂದು ಯಾವ ಸರ್ಕಾರಿ ಕಂಪನಿಯನ್ನು ಮಾರಾಟ ಮಾಡಲಿ

5. ರೈತರನ್ನು ಹೆಚ್ಚು ಅಸಹಾಯಕರನ್ನಾಗಿ ಮಾಡುವುದು ಹೇಗೆ.

Rahul Gandhi targets PM Modi over rising inflation in the country; says PMs Daily Work

#'ರೋಜ್‌ಸುಬಾಕಿಬಾತ್' ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ರಾಹುಲ್ ಈ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅತ್ಯಂತ ವೇಗವಾಗಿ ಏರಿಕೆಯಾಗುತ್ತಿದ್ದು, ಎಲ್‌ಪಿಜಿ ಬೆಲೆಯೂ ಹೆಚ್ಚಾಗಿದೆ. ಈ ಕುರಿತು ಕಾಂಗ್ರೆಸ್‌ನಿಂದ ನಿರಂತರ ಪ್ರತಿಭಟನೆ ನಡೆಯುತ್ತಿದೆ. ಪಕ್ಷದಿಂದ ಅನೇಕ ದೊಡ್ಡ ಪ್ರದರ್ಶನಗಳು ನಡೆದಿವೆ. ಆದರೆ ರಾಹುಲ್ ಗಾಂಧಿ ನಿರಂತರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಅದರ ಬಗ್ಗೆ ಬರೆಯುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಹಣದುಬ್ಬರ ಮತ್ತು ನಿರುದ್ಯೋಗದ ಕುರಿತು ರಾಹುಲ್ ಪ್ರತಿದಿನ ಟ್ವಿಟ್ ಮಾಡುತ್ತಿದ್ದಾರೆ.

English summary
Rahul Gandhi targets PM Modi over rising inflation in the country. He written Prime Minister’s list of daily work in a tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X