ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳೊಂದಿಗೆ ರಾಹುಲ್ ಮಹತ್ವದ ಸಭೆ

|
Google Oneindia Kannada News

Recommended Video

ರಾಹುಲ್ ಮಹತ್ವದ ಸಭೆ | Oneindia Kannada

ನವದೆಹಲಿ, ಡಿಸೆಂಬರ್ 13: ಛತ್ತೀಸ್ ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳ ಜೊತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು(ಡಿ.13) ಮಹತ್ವದ ಸಭೆ ನಡೆಸಲಿದ್ದಾರೆ.

ನವದೆಹಲಿಯಲ್ಲಿ ಸಭೆ ನಡೆಯಲಿದ್ದು, ಗುರುವಾರ ಸಂಜೆಯ ಒಳಗೆ ಮೂರು ರಾಜ್ಯಗಳ ಮುಖ್ಯಮಂತ್ರಿ ಅಭ್ಯರ್ಥಿಗಳು ಯಾರೆಂಬ ಕುರಿತು ಅಂತಿಮ ನಿರ್ಣಯ ಹೊರಬೀಳಲಿದೆ.

3 ರಾಜ್ಯಗಳ ಮುಂದಿನ ಮುಖ್ಯಮಂತ್ರಿ ಯಾರು? ರಾಹುಲ್ ಹೊಸ ಐಡಿಯಾ!3 ರಾಜ್ಯಗಳ ಮುಂದಿನ ಮುಖ್ಯಮಂತ್ರಿ ಯಾರು? ರಾಹುಲ್ ಹೊಸ ಐಡಿಯಾ!

ಮಧ್ಯಪ್ರದೇಶದಲ್ಲಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ನಡುವಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಬಿರುಸಿನ ಪೈಪೋಟಿ ನಡೆಯುತ್ತಿದೆ.

Rahul Gandhi to hold meetings with Chief Ministerial probables

ರಾಜಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ನಡುವೆ ಸಿಎಂ ಹುದ್ದೆಗಾಗಿ ಸ್ಪರ್ಧೆ ನಡೆಯುತ್ತಿದೆ.

ಛತ್ತೀಸ್ ಗಢದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭುಪೇಶ್ ಬಾಘೇಲ್ ಮತ್ತು ಪಕ್ಷದ ಮುಖಂಡ ಟಿ ಎಸ್ ಸಿಘ್ದಿಯೋ ನಡುವೆ ಪೈಪೋಟಿ ಎದ್ದಿದೆ.

ಸಿಎಂ ಯಾರೆಂದು ಹೈಕಮಾಂಡ್ ತೀರ್ಮಾನಿಸಲಿ ಎಂಬ ನಿರ್ಧಾರ; ಶಾಸಕ ಅಸಮಾಧಾನ ಸಿಎಂ ಯಾರೆಂದು ಹೈಕಮಾಂಡ್ ತೀರ್ಮಾನಿಸಲಿ ಎಂಬ ನಿರ್ಧಾರ; ಶಾಸಕ ಅಸಮಾಧಾನ

ಇರುವ ಮೂರು ರಾಜ್ಯಗಳಿಗೆ ಆರು ಜನ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದು, ಅಂತಿಮ ನಿರ್ಣಯ ರಾಹುಲ್ ಗಾಂಧಿ ಅವರಿಗೆ ಬಿಟ್ಟಿದ್ದು ಎನ್ನಲಾಗಿದೆ.

ಆದರೆ ರಾಹುಲ್ ಗಾಂಧಿ ಅವರು ಈಗಾಗಲೇ ಈ ಮೂರೂ ರಾಜ್ಯಗಳ ಸುಮಾರು 7.3 ಲಕ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ವಾಯ್ಸ್ ಮೆಸೇಜ್ ಕಳಿಸಿದ್ದು, ಕಾರ್ಯಕರ್ತರೇ ಮುಖ್ಯಮಂತ್ರಿ ಹುದ್ದೆಗೆ ಹೆಸರು ಸೂಚಿಸುವಂತೆ ಮನವಿ ಮಾಡಿದ್ದಾರೆ. ಈ ಆಯ್ಕೆ ಗೌಪ್ಯವಾಗಿರಲಿದ್ದು, ಕಾರ್ಯಕರ್ತರ ಹೆಸರನ್ನು ಎಲ್ಲಿಯೂ ಬಹಿರಂಗ ಪಡಿಸುವುದಿಲ್ಲ ಎಂಬ ಅಭಯವನ್ನೂ ರಾಹುಲ್ ಗಾಂಧಿ ನೀಡಿದ್ದಾರೆ.

ರಾಜಸ್ಥಾನ: ಬಿದ್ದ ಕಾಂಗ್ರೆಸ್ಸಿನ ಪತಾಕೆಯನ್ನು ಹಾರಿಸಿದ 'ಪೈಲಟ್'ರಾಜಸ್ಥಾನ: ಬಿದ್ದ ಕಾಂಗ್ರೆಸ್ಸಿನ ಪತಾಕೆಯನ್ನು ಹಾರಿಸಿದ 'ಪೈಲಟ್'

ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ 114 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಇತರರೊಂದಿಗೆ ಸೇರಿ ಸರ್ಕಾರ ರಚಿಸುತ್ತಿದ್ದರೆ, ರಾಜಸ್ಥಾನದಲ್ಲೂ 99(200) ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚಿಸುತ್ತಿದೆ. ಛತ್ತೀಸ್ ಗಢದ 90 ಕ್ಷೇತ್ರಗಳಲ್ಲಿ 68 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ಇದರೊಟ್ಟಿಗೆ ತೆಲಂಗಾಣ ಮತ್ತು ಮಿಜೋರಾಂ ನಲ್ಲೂ ವಿಧಾನಸಭಾ ಚುನಾವಣೆ ನಡೆದಿತ್ತು. ಎಲ್ಲಾ ಐದು ರಾಜ್ಯಗಳ ಚುನಾವಣೆ ಫಲಿತಾಂಶ ಡಿಸೆಂಬರ್ 11 ರಂದು ಹೊರಬಿದ್ದಿತ್ತು.

English summary
Congress President Rahul Gandhi is set to hold several rounds of meetings with the Chief Ministerial probables of all three states that is Chhattisgarh, Madhya Pradesh, Rajasthan and take a decision by Thursday evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X