ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷ, CWC ಸಭೆ ಇಲ್ಲ

Recommended Video

      ರಾಹುಲ್ ಮುಂದಿನ ಉತ್ತರಾಧಿಕಾರಿ ಯಾರು? | Oneindia Kannada

      ನವದೆಹಲಿ, ಮೇ 28: ರಾಜೀನಾಮೆ ಪ್ರಹಸನಕ್ಕೆ ತೆರೆಬಿದ್ದಿದ್ದು, ರಾಹುಲ್ ಗಾಂಧಿ ಅವರೇ ಪಕ್ಷಾಧ್ಯಕ್ಷರಾಗಿ ಮುಂದುವರಿಯುತ್ತಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

      ರಾಹುಲ್ ಗಾಂಧಿ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ಗಾಂಧಿ ವಾದ್ರಾ, ಅಹ್ಮದ್ ಪಟೇಲ್, ಕೆ ಸಿ ವೇಣುಗೋಪಾಲ್ ಮುಂತಾದವರು ಭೇಟಿ ಮಾಡಿ ಮನವೊಲಿಸುವಲ್ಲಿ ಸಫಲರಾಗಿದ್ದು, ರಾಜೀನಾಮೆ ನಡೆಯಿಂದ ಹಿಂದೆ ಸರಿಯುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ.

      ಶನಿವಾರ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅದಕ್ಕೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿ ಸದಸ್ಯರೆಲ್ಲರೂ ಒಮ್ಮತದಿಂದ ತಮ್ಮ ಅಸಮ್ಮತಿ ಸೂಚಿಸಿದ ಕಾರಣ ಅವರ ರಾಜೀನಾಮೆಯನ್ನು ತಿರಸ್ಕರಿಸಲಾಗಿತ್ತು.

      Rahul Gandhi will remain Congress president: Sources

      ಆದರೆ ತಮ್ಮ ನಡೆಯಿಂದ ಹಿಂದೆ ಸರಿಯುವುದಿಲ್ಲ ಎಂದ ರಾಹುಲ್ ಗಾಂಧಿ ಅವರ ನಡೆಯಿಂದಾಗಿ ಅವರ ರಾಜೀನಾಮೆ ನಂತರ ಮುಂದೆ ಕಾಂಗ್ರೆಸ್ ಚುಕ್ಕಾಣಿ ಯಾರ ಕೈ ಸೇರಬೇಕು ಎಂಬ ಬಗ್ಗೆ ಚರ್ಚೆ ನಡೆಸಲು ಈ ವಾರ ಮತ್ತೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಸಲು ಚಿಂತನೆ ನಡೆದಿತ್ತು. ಆದರೆ ಇದೀಗ ತಮ್ಮ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿದ ಕಾರಣ ಈ ಸಭೆಯನ್ನು ರದ್ದು ಮಾಡಲಾಗಿದೆ.

      ಇತ್ತ ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಅವರು ರಾಹುಲ್ ಗಾಂಧಿ ಅವರಿಗೆ ಕರೆ ಮಾಡಿ, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+