ಕಾಂಗ್ರೆಸ್ ಅಧ್ಯಕ್ಷರಾಗಿ ಇಂದು ರಾಹುಲ್ ಗಾಂಧಿ ಪಟ್ಟಾಭಿಷೇಕ
ನವದೆಹಲಿ, ಡಿಸೆಂಬರ್ 16: ಇಷ್ಟು ದಿನ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ಗಾಂಧಿಯವರು ಇಂದು(ಡಿ.16) ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ನವದೆಹಲಿಯ ಎಐಸಿಸಿ(ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ) ಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಔಪಚಾರಿಕ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ತಮ್ಮ ಪುತ್ರನಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು, ಸಂಸದರು, ಕಾಂಗ್ರೆಸ್ ನಾಯಕರು ಮುಂತಾದ ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ರಾಹುಲ್ ಗಾಂಧಿ ಅಭಿಮಾನಿಗಳು ಈಗಾಗಲೇ ದೆಹಲಿಯಲ್ಲಿರುವ ಕಾಂಗ್ರೆಸ್ ಕೇಂದ್ರ ಕಚೇರಿಯ ಮುಂದೆ ಜಮಾಯಿಸಿ, ಶುಭಕೋರಿದ್ದಾರೆ.
Visuals from outside Congress HQ in Delhi; sweets brought in, supporters continue to celebrate & raise slogans ahead of Rahul Gandhi's takeover as party President. pic.twitter.com/e62Fgumr7t
— ANI (@ANI) December 16, 2017
ಡಿಸೆಂಬರ್ 11 ರಂದು ರಾಹುಲ್ ಗಾಂಧಿಯರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಪಕ್ಷದ ಚುನಾವಣಾ ಉಸ್ತುವಾರಿ ನೋಡಿಕೊಳ್ಳುವ ಮುಲ್ಲಪಳ್ಳಿ ರಾಮಚಂದ್ರನ್ ಘೋಷಿಸಿದ್ದರು.
ಈ ಮೂಲಕ ಕಾಂಗ್ರೆಸ್ ನಲ್ಲಿ ಮತ್ತೊಂದು ಗಾಂಧಿ ಪರ್ವ ಆರಂಭವಾದಂತಾಗಿದೆ.












Click it and Unblock the Notifications