• search
For new-delhi Updates
Allow Notification  

  ರಾಹುಲ್ ಗಾಂಧಿ ರಾಜ್ಯಕ್ಕೆ ಯಾವಾಗ ಬರ್ತಾರೆ ಗೊತ್ತಾ?

  |

  ನವದೆಹಲಿ, ಜನವರಿ 13: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿ ರಾಹುಲ್ ಗಾಂಧಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು ಫೆಬ್ರವರಿ 10 ರಿಂದ 3 ದಿನಗಳ ಕಾಲ ರಾಜ್ಯದೆಲ್ಲೆಡೆ ಸಂಚರಿಸಲಿದ್ದಾರೆ.

  ದೆಹಲಿಯಲ್ಲಿ ಶನಿವಾರ ನಡೆದ ಎಐಸಿಸಿ ನಾಯಕರ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದ ಸಭೆಯಲ್ಲಿ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯ ರೂಪುರೇಷೆ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

  ಜ.27ರಂದು ರಾಹುಲ್ ಗಾಂಧಿ ರಾಜ್ಯಕ್ಕೆ, ವಿವಿಧ ಜಿಲ್ಲೆಗೆ ಭೇಟಿ

  ಎಐಸಿಸಿ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈಮೊದಲು ಜನವರಿ 2 ಅಥವಾ ಮೂರನೇ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮುಂದೂಡಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರವಾಸವು ಫೆಬ್ರವರಿ ಎರಡನೇ ವಾರ ಪ್ರವಾಸ ಕೈಗೊಳ್ಳಲು ನಿರ್ಣಯಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

  Rahul Gandhi will visit Karnataka on Feb 10

  ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಡಿಸೆಂಬರ್ 13 ರಿಂದ ಜನವರಿ 13 ರವರೆಗೆ ರಾಜ್ಯ ಸರ್ಕಾರದ ಸಾಧನಾ ಸಮಾವೇಶದ ಹೆಸರಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಪ್ರತ್ಯೇಕವಾಗಿ ವಿಧಾನಸಭಾ ಕ್ಷೇತ್ರವಾರು ಸರ್ಕಾರದ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ.

  ಫೆಬ್ರವರಿ 10 ಕ್ಕೆ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ 2018 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಅಧಿಕೃತವಾಗಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನೆನಲೆಯಲ್ಲಿ ಶನಿವಾರ ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ನಡೆದ ಪ್ರಮುಖ ನಾಯಕರ ಸಭೆಯಲ್ಲಿ ವಿಧಾನ ಸಭಾ ಚುನಾವಣೆಗೆ ರಾಹುಲ್ ಗಾಂಧಿಯವರನ್ನು ಕರೆತುರುವ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಯಿತು.

  ರಾಜ್ಯದಲ್ಲಿ ಈಗಾಗಲೇ ಪ್ರಮುಖ ಪ್ರತಿಪಕ್ಷ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾರಕ್ಕೊಂದು ಬಾರಿಯಂತೆ ಸತತ ಭೇಟಿ ನೀಡುತ್ತಲೇ ಇದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷವೂ ಕೂಡ ಮುಂದಿನ ಚುನಾವಣೆಗೆ ಕಾರ್ಯತಂತ್ರ ರೂಪಿಸುತ್ತಿದ್ದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕರೆತರಲಾಗುತ್ತಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  ಇನ್ನಷ್ಟು ನವದೆಹಲಿ ಸುದ್ದಿಗಳುView All

  English summary
  AICC president Rahul gandhi will visit Karnataka On February 10 to 12 at various places in the state. The tour programme fixed in the meeting held in Delhi on Saturday.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more