ಮಹಿಳಾ ಮೀಸಲಾತಿ : ಪ್ರಧಾನಿ ಮೋದಿಯವರಿಗೆ ಪತ್ರ ಬರೆದ ರಾಹುಲ್ ಗಾಂಧಿ

Recommended Video

      ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದ ರಾಹುಲ್ ಗಾಂಧಿ | Oneindia Kannada

      ನವದೆಹಲಿ, ಜುಲೈ 16 : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡು ಪುಟಗಳ ಪತ್ರ ಬರೆದಿದ್ದಾರೆ.

      ಜುಲೈ 18ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಮನವಿ ಮಾಡಿ ಪತ್ರ ಬರೆದಿದ್ದು, ಈ ಕುರಿತು ಮಹಿಳಾ ಕಾಂಗ್ರೆಸ್ 32 ಲಕ್ಷ ಸಹಿ ಸಂಗ್ರಹ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

      ರಾಜ್ಯಸಭೆಯಲ್ಲಿ ಮಾರ್ಚ್ 9, 2010ರಲ್ಲೇ ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡಿಸಲಾಗಿತ್ತು. ಆದರೆ ಅದು ಲೋಕಸಭೆಯಲ್ಲಿ ಇನ್ನೂ ಮಂಡನೆಯಾಗಿಲ್ಲ. 2014ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೂ ಈ ವಿಧೇಯಕವನ್ನು ಅಂಗೀಕರಿಸುವುದಾಗಿ ಹೇಳಿತ್ತು ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

      Rahul Gandhi writes a letter to PM Narendra Modi

      ಪಂಚಾಯತ್ ಮಟ್ಟದಲ್ಲಿ ಕೂಡ ಪುರುಷರಿಗಿಂತ ಮಹಿಳೆಯರೇ ನಾಯಕತ್ವದ ಗುಣಗಳನ್ನು ತೋರಿಸುತ್ತಿದ್ದಾರೆ ಎಂದು ಸಿನಿಕರಾಗಿರುವ ನಿಮ್ಮ ಪಕ್ಷದ ನಾಯಕರಿಗೆ ಮನವರಿಕೆ ಮಾಡಿಕೊಡಿ. ಸಮಾಜದ ಒಳಿತಿಗಾಗಿ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಮಹಿಳೆಯರೇ ಮುಂದು. ಭಾರತವನ್ನು ಬದಲಾಯಿಸುವ ಸಾಮರ್ಥ್ಯ ಮಹಿಳೆಯರಿಗಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

      ನೀವು ಹಲವಾರು ಸಾರ್ವಜನಿಕ ಸಭೆಗಳಲ್ಲಿ ಕೂಡ ಮಹಿಳಾ ಸಬಲೀಕರಣದ ಬಗ್ಗೆ ಮತ್ತು ಆಡಳಿತದಲ್ಲಿ ಅವರನ್ನು ಒಳಗೊಳ್ಳಿಸುವಿಕೆ ಬಗ್ಗೆ ಕೂಡ ಮಾತನಾಡಿದ್ದೀರಿ. ಮಹಿಳೆಯರ ಅಭ್ಯುದಯಕ್ಕಾಗಿ ನೀವು ಬದ್ಧರಾಗಿದ್ದೀರೆಂದು ತೋರಿಸಲು ಇದಕ್ಕಿಂತ ಉತ್ತಮ ಅವಕಾಶ ಮತ್ತಾವುದಿದೆ? ಇನ್ನೂ ತಡಮಾಡಿದರೆ ಲೋಕಸಭೆ ಚುನಾವಣೆಯೊಳಗೆ ಈ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆ ಮಾಡಲು ಸಾಧ್ಯವೇ ಆಗುವುದಿಲ್ಲ ಎಂದು ರಾಹುಲ್ ಕಳವಳ ವ್ಯಕ್ತಪಡಿಸಿದ್ದಾರೆ.

      ಜುಲೈ 18ರಿಂದ ಆರಂಭವಾಗಲಿರುವ ಆಗಸ್ಟ್ 10ರಂದು ಅಂತ್ಯಗೊಳ್ಳಲಿದ್ದು, ಒಟ್ಟು 18 ದಿನ ನಡೆಯಲಿದೆ. ಪ್ರಸ್ತುತ ಎನ್ ಡಿಎ ಸರ್ಕಾರದ ಈ ಅವಧಿಯ ಕೊನೆಯ ಮುಂಗಾರು ಅಧಿವೇಶನ ಇದಾಗಿದ್ದು, ಹಲವು ಮಹತ್ವದ ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+