ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆರ್ಥಿಕ ಪ್ಯಾಕೇಜ್ ಮರುಪರಿಶೀಲಿಸಿ, ಬಡವರಿಗೆ ನೇರವಾಗಿ ಹಣ ನೀಡಿ: ರಾಹುಲ್

|
Google Oneindia Kannada News

ನವದೆಹಲಿ, ಮೇ 16: ಬಡವರಿಗೆ ನೇರವಾಗಿ ಹಣ ತಲುಪುವಂತಾಗಲಿ, ಆರ್ಥಿಕ ಪ್ಯಾಕೇಜ್‌ನ್ನು ಮರು ಪರಿಶೀಲಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

Recommended Video

ರಾಜ್ಯದಲ್ಲಿ ಕೈಗಾರಿಕೆಗಳ ಪುನರ್ ಆರಂಭಕ್ಕೆ ಸೂಚನೆ | Industries to reopen soon | Oneindia Kannada

ಕೊವಿಡ್ 19 ಬಿಕ್ಕಟ್ಟು ಎದುರಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು.

ಕೊರೊನಾ: ಮೋದಿ ಸರಕಾರ ಇನ್ನಾದರೂ ರಾಹುಲ್ ಗಾಂಧಿ ಮಾತಿಗೆ ಮನ್ನಣೆ ನೀಡಲಿ ಕೊರೊನಾ: ಮೋದಿ ಸರಕಾರ ಇನ್ನಾದರೂ ರಾಹುಲ್ ಗಾಂಧಿ ಮಾತಿಗೆ ಮನ್ನಣೆ ನೀಡಲಿ

ಆದರೆ ಜನತೆ ಕೈಗೆ ಹಣ ಸಿಗದೆ ಇದ್ದರೆ, ಬಡವರು ನಿರ್ಗತಿಕರು ಏನು ಮಾಡಬೇಕು. ಹೀಗಾಗಿ ಆರ್ಥಿಕ ಪ್ಯಾಕೇಜ್ ಮರುಪರಿಶೀಲನೆಯ ಅಗತ್ಯವಿದೆ ಎಂದು ಮೋದಿಗೆ ಸಲಹೆ ನೀಡಿದ್ದಾರೆ.

Rahul Gandi Says PM Should Reconsider Economic Package Give Money To Poor

2019ರಲ್ಲಿ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಎನ್‌ವೈಎವೈ ಯೋಜನೆಯನ್ನು ಪ್ರಸ್ತಾಪಿಸಿತ್ತು. ಇದರ ಮೂಲಕ ಸಮಾಜದ ಬಡ ವರ್ಗದ ಜನರಿಗೆ ವಾರ್ಷಿಕವಾಗಿ 72,000 ರೂ.ಗಳ ಆದಾಯದ ಬೆಂಬಲ ಲಭ್ಯವಾಗುತ್ತಿತ್ತು. ಕೇಂದ್ರ ಸರ್ಕಾರವು ಇದಕ್ಕೆ ಸಮಾನವಾದ ಯೋಜನೆಯೊಂದಿಗೆ ಮುಂದೆ ಬರುವಂತೆ ಒತ್ತಾಯಿಸುತ್ತೇನೆ ಎಂದರು.

ನನ್ನ ಸಲಹೆಗಳನ್ನು ಸರ್ಕಾರ ಒಪ್ಪಿಕೊಳ್ಳಬಹುದು ಎನ್ನುವ ನಂಬಿಕೆ ನನಗಿದೆ. ಜನರ ಖಾತೆಗೆ ಹಣ ಹಾಕುವ ಬಗ್ಗೆ ಪ್ರಸ್ತಾಪಿಸಿರುವ ಹಲವರೊಂದಿಗೆ ನಾನು ಚರ್ಚಿಸಿದ್ದೇನೆ. ಈ ಎಲ್ಲ ಸಲಹೆಗಳನ್ನು ಪ್ರಧಾನಿ ಮೋದಿ ಗಂಭೀರವಾಗಿ ಯೋಚಿಸಬೇಕು ಎಂದು ಹೇಳಿದರು.

English summary
Congress MP Rahul Gandhi today warned the government of a "catastrophic problem" if it did not immediately put money into the bank accounts of people worst affected by the coronavirus lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X