ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ವಿಟ್ಟರ್‌ನಲ್ಲಿ ರಾಹುಲ್, ಕೇಜ್ರಿವಾಲ್ ಸೀಟು ಹಂಚಿಕೆ ಯೂ-ಟರ್ನ್ ಜಟಾಪಟಿ

|
Google Oneindia Kannada News

ನವದೆಹಲಿ, ಏ.16: ಮಾತುಕತೆ ಮೂಲಕ ಸೀಟು ಹಂಚಿಕೆ ಮಾಡಿಕೊಳ್ಳಬೇಕಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವಿಟ್ಟರ್‌ನಲ್ಲಿ ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ.

ಬಿಜೆಪಿ ಸೋಲಿಸಲು ಆಪ್‌ನೊಂದಿಗೆ ಮೈತ್ರಿ ಬಹುತೇಕ ಅಂತ್ಯವಾಗಿತ್ತು. ಆದರೆ ಅರವಿಂದ್ ಕೇಜ್ರಿವಾಲ್ ಯೂ-ಟರ್ನ್ ಹೊಡೆದಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Rahul, Kejrival twitter war about delhi seat sharing

ಇದಕ್ಕೆ ಪ್ರತ್ಯುತ್ತರ ನೀಡಿರುವ ಕೇಜ್ರಿವಾಲ್, ಮಹಾಮೈತ್ರಿ ಎನ್ನುವುದು ರಾಹುಲ್‌ಗೆ ಕೇವಲ ಪ್ರದರ್ಶನಕ್ಕೆ ಆದರೆ ನೈಜವಾಗಿ ದೇಶದೆಲ್ಲೆಡೆ ಬಿಜೆಪಿಗೆ ಕಾಂಗ್ರೆಸ್ ಸಹಾಯ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಆಪ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಮೋದಿ-ಷಾ ಸೋಲಿಸಲು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಕೇಜ್ರಿವಾಲ್ ಹೇಳಿದ್ದರು.

ಆದರೆ ಸೋಮವಾರ ಸಂಜೆ ಟ್ವೀಟ್ ಮಾಡಿರುವ ರಾಹುಲ್, ದೆಹಲಿಯಲ್ಲಿ 4 ಸೀಟನ್ನು ಆಪ್‌ಗೆ ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಾಗಿತ್ತು ಆದರೆ ಕೇಜ್ರಿವಾಲ್ ಯೂ-ಟರ್ನ್ ಹೊಡೆದಿದ್ದಾರೆ. ಈಗಲೂ ಮಾತುಕತೆಗೆ ಕಾಂಗ್ರೆಸ್ ಬಾಗಿಲು ತೆರೆದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಮುಯ ಮೀರುತ್ತಿದೆ. ಇದಕ್ಕೆ ಮರು ಟ್ವೀಟ್ ಮಾಡಿರುವ ಕೇಜ್ರಿವಾಲ್ ಮಹಾಮೈತ್ರಿ ಬಗ್ಗೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ ಎನ್ನುವುದು ಈ ಟ್ವೀಟ್‌ನಿಂದ ತಿಳಿಯುತ್ತದೆ ಸುಖಾಸುಮ್ಮನೆ ಹೇಳಿಕೆ ನೀಡಿರುವುದು ಬೇಸರ ತಂದಿದೆ ಎಂದು ಹೇಳಿದ್ದಾರೆ.

English summary
Congress president rahul gandhi and delhi chief minister Arvind Kejriwal started Twitter war about seat sharing of Upcoming Lok sabha elections. Both the leaders makes U-Turn jibe against each other
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X