ಇಡಿ ವಿಚಾರಣೆಗೆ ರಾಹುಲ್, ಪ್ರಿಯಾಂಕಾ: ಕಾಂಗ್ರೆಸ್ ಪ್ರತಿಭಟನೆ
ನವದೆಹಲಿ, ಜೂ. 13: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ರಾಹುಲ್ ಗಾಂಧಿ ಸೋಮವಾರ ಹಾಜರಾದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಡಿ ಕಚೇರಿಗೆ ರಾಹುಲ್ ಗಾಂಧಿ ಅವರೊಂದಿಗೆ ಬಂದರು. ಈ ಹಿನ್ನಲೆಯಲ್ಲಿ ಇಡಿ ಕಚೇರಿ ಬಳಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ ರಾಹುಲ್ ಗಾಂಧಿಯವರಿಗೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆ ಅವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಯಿತು.
ರಾಹುಲ್ ಅವರ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ದಿಗ್ವಿಜಯ ಸಿಂಗ್, ಪಿ ಚಿದಂಬರಂ, ಜೈರಾಮ್ ರಮೇಶ್, ಸಚಿನ್ ಪೈಲಟ್, ಮುಕುಲ್ ವಾಸ್ನಿಕ್, ಗೌರವ್ ಗೊಗೊಯ್ ಮತ್ತು ರಾಜೀವ್ ಶುಕ್ಲಾ ಬಂದು ಸೇರಿದ್ದಾರೆ. ಈ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ರಾಹುಲ್ ವಿಚಾರಣೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿ ಮೆರವಣಿಗೆ, ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು. ಆದರೂ ಇಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಾರಿ ನಿರ್ದೇಶನಾಲಯ ದುರ್ಬಳಕೆ
ರಾಹುಲ್ ವಿಚಾರಣೆ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ವಿವಿಧೆಡೆ ಕಾಂಗ್ರೆಸ್ ಪ್ರತಿಭಟನೆಗೆ ತಯಾರಿ ನಡೆಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಜಾರಿ ನಿರ್ದೇಶನಾಲಯ ಬಳಸಿಕೊಂಡು ಅಭಿವ್ಯಕ್ತಿಯನ್ನು ಹತ್ತಿಕ್ಕಿ ಸೇಡಿನ ರಾಜಕೀಯ ಮಾಡುತ್ತಿದೆ. ರಾಹುಲ್ ಹಾಗೂ ಪ್ರಿಯಾಂಕ ವಿರುದ್ಧ ಆರೋಪಗಳು ಸುಳ್ಳು ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೂನ್ 23ಕ್ಕೆ ವಿಚಾರಣೆಗೆ ಸೋನಿಯಾ ಗಾಂಧಿ
ಇದೇ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಕೇಂದ್ರ ಸಂಸ್ಥೆ ಸಮನ್ಸ್ ನೀಡಿದೆ. ಅವರು ಕೋವಿಡ್ ಪಾಸಿಟಿವ್ ಆದ ಕಾರಣ ವಿಚಾರಣೆಗೆ ಹಾಜರಾಗಲು ಹೆಚ್ಚಿನ ಸಮಯವನ್ನು ಕೋರಿದರು. ಸದ್ಯ ಅವರಿಗೆ ಇಡಿ ಜೂನ್ 23ಕ್ಕೆ ಹೊಸ ಸಮನ್ಸ್ ನೀಡಿದೆ. ಭಾನುವಾರ ಕೋವಿಡ್ ಕಾರಣದಿಂದ ಸೋನಿಯಾ ಗಾಂಧಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೋನಿಯಾ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ನಮ್ಮನ್ನು ಹಿಮ್ಮೆಟ್ಟಿಸಲು ಯಾರಿಂದಲೂ ಸಾಧ್ಯವಿಲ್ಲ
ಈ ಹಿನ್ನೆಲೆಯಲ್ಲಿ ಮಾತನಾಡಿದ ಕಾಂಗ್ರೆಸ್‌ನ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ್ ಅವರು ಕೇಂದ್ರ ಸರ್ಕಾರವು ನಮಗೆ ಎಚ್ಟು ಹೆದರಿದೆ ಎಂದು ಸಾಬೀತಾಗಿದೆ. ಇದೊಂದು ಹೇಡಿ ಸರ್ಕಾರವಾಗಿದೆ. ನಮ್ಮನ್ನು ಹಿಮ್ಮೆಟ್ಟಿಸಲು ಯಾರಿಂದಲೂ ಸಾಧ್ಯವಿಲ್ಲ, ಆಂಗ್ಲರು ಅಥವಾ ಈಗಿನ ಹೊಸ ದಬ್ಬಾಳಿಕೆ ಆಡಳಿತಗಾರರಿಗೆ ಸಾಧ್ಯವಿಲ್ಲ. ನಾವು ಇಡಿ ಕಚೇರಿಯವರೆಗೆ ಮೆರವಣಿಗೆ ಮಾಡುತ್ತೇವೆ. ನಾವು ಗಾಂಧಿ ಮಾರ್ಗವನ್ನು ಆರಿಸುತ್ತೇವೆ, ನಾವು ಬಡವರ ಹಕ್ಕುಗಳಿಗಾಗಿ ಹೋರಾಡುತ್ತೇವೆ. 136 ವರ್ಷಗಳ ಕಾಲ ಕಾಂಗ್ರೆಸ್ ಸಾಮಾನ್ಯ ಜನರ ಧ್ವನಿಯಾಗಿದೆ ಎಂದು ಅವರು ಹೇಳಿದರು.
|
ಎಷ್ಟು ಗಂಟೆ ನಡೆಯಲಿದೆ ವಿಚಾರಣೆ
ರಾಹುಲ್ ಗಾಂಧಿ ಅವರ ವಿಚಾರಣೆ ಸುಮಾರು ಐದಾರು ಗಂಟೆ ನಡೆಯುವ ಸಾಧ್ಯತೆಯಿದೆ ಎಂಬ ಮಾಹಿತಿ ಬಂದಿದೆ. ಇದಕ್ಕೂ ಮುನ್ನ ಕಾರ್ಯಕರ್ತರು ಜಿಂದಾಬಾದ್ ಘೋಷಣೆಯೊಂದಿಗೆ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಕಚೇರಿ ತನಕ ಕರೆದುಕೊಂಡು ಬಂದರು. ಸುಮಾರು 11.30 ಕ್ಕೆ ವಿಚಾರಣೆ ಆರಂಭವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Recommended Video
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications