ಕೇಂದ್ರದ ವೈಫಲ್ಯ ಖಂಡಿಸಿ ರಾಹುಲ್ ಗಾಂಧಿ ಉಪವಾಸ ಸತ್ಯಾಗ್ರಹ

Posted By:
Subscribe to Oneindia Kannada

ನವದೆಹಲಿ, ಏಪ್ರಿಲ್ 09: ಕೇಂದ್ರ ಸರ್ಕಾರ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿ ಮತ್ತು ಏಪ್ರಿಲ್ 2 ರಂದು ಉತ್ತರ ಭಾರತದಾದ್ಯಂತ ನಡೆದ ದಲಿತ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸೆಯನ್ನು ವಿರೋಧಿಸಿ ಒಂದು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ.

ದೆಹಲಿಯ ರಾಜ್ ಘಾಟ್ ನ ಮಹಾತ್ಮಾ ಗಾಂಧಿ ಸ್ಮಾರಕದ ಬಳಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಉಪವಾಸ ಇಂದು(ಏ.09) ಸತ್ಯಾಗ್ರಹ ನಡೆಸಲಿದ್ದಾರೆ.

ಕರ್ನಾಟಕ ಚುನಾವಣೆ ಮೇಲೂ ಪ್ರಭಾವ ಬೀರೀತೆ ಉತ್ತರದ ದಲಿತ ಪ್ರತಿಭಟನೆ?!

ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಬ್ಯಾಂಕ್ ಹಗರಣ, ಸಂಸತ್ ಅಧಿವೇಶನ ಸರಿಯಾಗಿ ನಡೆಸದಿರುವುದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ವೈಫಲ್ಯಗಳನ್ನು ಈ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ಖಂಡಿಸಲಿದ್ದಾರೆ.

Rahul to sit a day fast against central government

ಪರಿಶಿಷ್ಟ ಜಾತಿ/ಪಂಗಡ ಕಾಯ್ದೆಯಲ್ಲಿ ತಿದ್ದುಪಡಿ ತರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಏಪ್ರಿಲ್ 2 ರಂದು ನಡೆದ ಭಾರತ್ ಬಂದ್ ಸಂದರ್ಭದಲ್ಲಿ ಉತ್ತರ ಭಾರತದಾದ್ಯಂತ ನಡೆದ ಗಲಭೆಯಲ್ಲಿ 10 ಜನ ಅಸುನೀಗಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
As an attempt to "promote communal harmony" and to protest clashes during the Dalit protests on April 2nd, AICC president and other Congress leaders will sit on a day fast today at Mahatma Gandhi memorial in Rajghat, Delhi

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ