ರಾಹುಲ್ ಜನ್ಮದಿನ: ಕಾಂಗ್ರೆಸ್ ಕೇಂದ್ರ ಕಚೇರಿ ಮುಂದೆ ಸಂಭ್ರಮವೋ ಸಂಭ್ರಮ!

Recommended Video

      ರಾಹುಲ್ ಜನ್ಮದಿನ: ಕಾಂಗ್ರೆಸ್ ಕೇಂದ್ರ ಕಚೇರಿ ಮುಂದೆ ಸಂಭ್ರಮವೋ ಸಂಭ್ರಮ!

      ನವದೆಹಲಿ, ಜೂನ್ 19: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು(ಜೂನ್ 19) ತಮ್ಮ 48 ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದರಿಂದ ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯ ಮುಂದೆ ಸಂಭ್ರಮದ ವಾತಾವರಣ ಮನೆಮಾಡಿದೆ.

      ಕಾಂಗ್ರೆಸ್ ಅಧ್ಯಕ್ಷರಾಗಿ ಅವರು ಅಧಿಕಾರ ಸ್ವೀಕರಿಸಿದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನವಾಗಿರುವುದರಿಂದ ಮತ್ತಷ್ಟು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕಳೆದ ಡಿಸೆಂಬರ್ ನಲ್ಲಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.

      ಜೂನ್ 19, 1970 ರಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಪುತ್ರರಾಗಿ ಜನಿಸಿದ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಲೋಕಸಭಾ ಸದಸ್ಯರೂ ಹೌದು. 2004 ರಲ್ಲಿ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟ ರಾಹುಲ್ ಗಾಂಧಿ, ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನೇ ಪ್ರತಿನಿಧಿಸುತ್ತಿದ್ದಾರೆ.

      Rahul turns 48, Congress in celebration mood

      ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿರುವ ರಾಹುಲ್ ಗಾಂಧಿ ಅವರ ಜನ್ಮದಿನಕ್ಕೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಸಹ ಟ್ವಿಟ್ಟರ್ ನಲ್ಲಿ ಶುಭಹಾರೈಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+