ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿಯವರೇ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿ

|
Google Oneindia Kannada News

Recommended Video

ರಾಹುಲ್ ಗಾಂಧಿಯವರೇ ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿ | Oneindia Kannada

ನವದೆಹಲಿ, ಜುಲೈ 23: ಮುಂಬರುವ ಲೋಕಸಭಾ ಚುನಾವಣೆ(2019)ಗೆ ರಾಹುಲ್ ಗಾಂಧಿ ಅವರೇ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಭಾನುವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲಾ, 'ಸಹಜವಾಗಿಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನೇ ನಮ್ಮ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸುತ್ತೇವೆ. ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ' ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹೊಸ ಸದಸ್ಯರ ಮೊದಲ ಸಭೆಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹೊಸ ಸದಸ್ಯರ ಮೊದಲ ಸಭೆ

ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, '2004 ರ ರೀತಿಯಲ್ಲೇ ಪ್ರದರ್ಶನ ತೋರುವ ಗುರಿ ನಮ್ಮದು. ಜನರು ನಿರ್ಧರಿಸುತ್ತಾರೆ. ಒಮ್ಮೆ ಕಾಂಗ್ರೆಸ್ ಪಕ್ಷ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸುತ್ತದೆ. ಆಗ ನಮ್ಮ ಜೊತೆ ಯಾರ್ಯಾರಿಗೆ ಕೈಜೋಡಿಸಬೇಕು ಅನ್ನಿಸುತ್ತದೋ, ಅವರನ್ನೆಲ್ಲ ನಾವು ಸ್ವಾಗತಿಸುತ್ತೇವೆ' ಎಂದು ಅವರು ಹೇಳಿದ್ದಾರೆ.

Rahul will be Congress prime ministerial candidate

ಪಕ್ಷದ ಬಲ ಹೆಚ್ಚಿಸುವ ಮತ್ತು 2019 ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯೋಜನೆ ರೂಪಿಸುವ ಸಲುವಾಗಿ ಈ ಸಭೆಯನ್ನು ನಡೆಸಲಾಗಿತ್ತು. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚೆಗಷ್ಟೇ ರಚಿಸಲಾದ ಕಾರ್ಯಕಾರಿ ಸಮಿತಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸ್ಥಾನ ಪಡೆದಿರುವುದು ವಿಶೇಷ.

English summary
Congress president Rahul Gandhi will be the party's prime ministerial candidate in the 2019 Lok Sabha elections. In response to a media query on who will be prime ministerial face for the general elections, at a press conference following the Congress Working Committee (CWC) meeting on Sunday, Congress spokesperson Randeep Singh Surjewala said this
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X