ಬಜೆಟ್‌ಗೂ ಮುನ್ನ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ

ನವದೆಹಲಿ, ಜನವರಿ 23: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಗೆ ಕೆಲವೇ ದಿನಗಳಿಗೆ ಮುನ್ನವೇ ಸಚಿವ ಸಂಪುಟದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

ಅನಾರೋಗ್ಯದಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಖಾತೆಯ ಹೊಣೆಗಾರಿಕೆಯನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ತಾತ್ಕಾಲಿಕವಾಗಿ ವರ್ಗಾಯಿಸಲಾಗಿದೆ.

ಫೆಬ್ರುವರಿ 1ರಂದು ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ.

railway minister piyush goyal temporary charge of finance ministry interim budget arun jaitley

'ಅನಾರೋಗ್ಯಕ್ಕೆ ಒಳಗಾಗಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಅರುಣ್ ಜೇಟ್ಲಿ ಅವರ ಖಾತೆಯನ್ನು ಪ್ರಧಾನಿಯವರ ಸಲಹೆಯಂತೆ ಭಾರತದ ರಾಷ್ಟ್ರಪತಿಯವರು ಪಿಯೂಷ್ ಗೋಯಲ್ ಅವರ ಹಾಲಿ ಖಾತೆಗಳಿಗೆ ಹೆಚ್ಚುವರಿಯಾಗಿ ತಾತ್ಕಾಲಿಕವಾಗಿ ವಹಿಸಲಾಗುವುದು' ಎಂದು ರಾಷ್ಟ್ರಪತಿಭವನದ ಪತ್ರಿಕಾ ಪ್ರಕಟಣೆ ತಿಳಿಸಿದೆ.

'ಹಾಗೆಯೇ ಪ್ರಧಾನಿಯವರ ಸಲಹೆಯಂತೆ ಅರುಣ್ ಜೇಟ್ಲಿ ಅವರ ಅನಾರೋಗ್ಯದ ಅವಧಿಯಲ್ಲಿ ಅಥವಾ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆಗೆ ಕಾರ್ಯನಿರ್ವಹಣೆಗೆ ಮರಳಲು ಅವರಿಗೆ ಸಾಧ್ಯವಾಗುವವರೆಗೂ ಆ ಅವಧಿವರೆಗೂ ಖಾತೆ ರಹಿತ ಸಚಿವ ಎಂದು ಪರಿಗಣಿಸಲಾಗಿದೆ' ಎಂದು ಸಹ ಪ್ರಕಟಣೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+