ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್‌ಗೂ ಮುನ್ನ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ

|
Google Oneindia Kannada News

ನವದೆಹಲಿ, ಜನವರಿ 23: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಗೆ ಕೆಲವೇ ದಿನಗಳಿಗೆ ಮುನ್ನವೇ ಸಚಿವ ಸಂಪುಟದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

ಅನಾರೋಗ್ಯದಿಂದಾಗಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಖಾತೆಯ ಹೊಣೆಗಾರಿಕೆಯನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ತಾತ್ಕಾಲಿಕವಾಗಿ ವರ್ಗಾಯಿಸಲಾಗಿದೆ.

ಮಧ್ಯಂತರ ಬಜೆಟ್ ಮನವೊಲಿಕೆಯದ್ದಲ್ಲ, ಅನಾರೋಗ್ಯದ ಮಧ್ಯೆಯೂ ಜೇಟ್ಲಿ ಹೇಳಿದ್ದೇನು?ಮಧ್ಯಂತರ ಬಜೆಟ್ ಮನವೊಲಿಕೆಯದ್ದಲ್ಲ, ಅನಾರೋಗ್ಯದ ಮಧ್ಯೆಯೂ ಜೇಟ್ಲಿ ಹೇಳಿದ್ದೇನು?

ಫೆಬ್ರುವರಿ 1ರಂದು ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ.

railway minister piyush goyal temporary charge of finance ministry interim budget arun jaitley

'ಅನಾರೋಗ್ಯಕ್ಕೆ ಒಳಗಾಗಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಅರುಣ್ ಜೇಟ್ಲಿ ಅವರ ಖಾತೆಯನ್ನು ಪ್ರಧಾನಿಯವರ ಸಲಹೆಯಂತೆ ಭಾರತದ ರಾಷ್ಟ್ರಪತಿಯವರು ಪಿಯೂಷ್ ಗೋಯಲ್ ಅವರ ಹಾಲಿ ಖಾತೆಗಳಿಗೆ ಹೆಚ್ಚುವರಿಯಾಗಿ ತಾತ್ಕಾಲಿಕವಾಗಿ ವಹಿಸಲಾಗುವುದು' ಎಂದು ರಾಷ್ಟ್ರಪತಿಭವನದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಸಾಧ್ಯತೆ ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಸಾಧ್ಯತೆ

'ಹಾಗೆಯೇ ಪ್ರಧಾನಿಯವರ ಸಲಹೆಯಂತೆ ಅರುಣ್ ಜೇಟ್ಲಿ ಅವರ ಅನಾರೋಗ್ಯದ ಅವಧಿಯಲ್ಲಿ ಅಥವಾ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆಗೆ ಕಾರ್ಯನಿರ್ವಹಣೆಗೆ ಮರಳಲು ಅವರಿಗೆ ಸಾಧ್ಯವಾಗುವವರೆಗೂ ಆ ಅವಧಿವರೆಗೂ ಖಾತೆ ರಹಿತ ಸಚಿವ ಎಂದು ಪರಿಗಣಿಸಲಾಗಿದೆ' ಎಂದು ಸಹ ಪ್ರಕಟಣೆ ಹೇಳಿದೆ.

English summary
Railway Minister Piyush Goyal has been given the temporary charge of the Finance Ministry just 9 days ahead of the interim budget, with Finance Minister Arun Jaitley in the US for treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X