ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಸುತ್ತಮುತ್ತ ಮಳೆ ಶುರು: ಆಗಸ್ಟ್ 20ರವರೆಗೂ ಭಾರೀ ಮಳೆ ಸಾಧ್ಯತೆ

|
Google Oneindia Kannada News

ನವದೆಹಲಿ, ಆಗಸ್ಟ್ 16: ದೆಹಲಿ ಸುತ್ತಮುತ್ತಲೂ ಸಾಧಾರಣ ಮಳೆ ಆರಂಭವಾಗಿದ್ದು, ಆಗಸ್ಟ್ 20ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಸಾಧಾರಣ ಮಳೆ ಬರಲಿದ್ದು ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಭಾರಿ ಮಳೆ ಮುನ್ಸೂಚನೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಭಾರಿ ಮಳೆ ಮುನ್ಸೂಚನೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಆಗಸ್ಟ್ 16-18ರವರೆಗೆ ಸಾಮಾನ್ಯ ಮಳೆಯಾಗಲಿದೆ ಮುಂದಿನ 2 ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಭಾರತದಲ್ಲಿ ನೈಋತ್ಯ ಮುಂಗಾರು ಚುರುಕಾಗಿರುವ ಕಾರಣ ದೇಶಾದ್ಯಂತ ಮಳೆಯಾಗಲಿದೆ. ರಾಜಸ್ತಾನ, ಮಧ್ಯಪ್ರದೇಶ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ ಆಗಸ್ಟ್ 20ರವರೆಗೂ ಮಳೆಯಾಗಲಿದೆ.

Rain Started In Delhi Continuous Till August 20

ಮಂದಿನ 48 ಗಂಟೆಗಳಲ್ಲಿ ರಾಜಸ್ತಾನ ಹಾಗೂ ಸುತ್ತಮುತ್ತಲಿನ ಪ್ರದೇಶಗ,ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಕರ್ನಾಟಕದ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಮನೆ, ಕೃಷಿ ಭೂಮಿಗಳಿಗೆ ನೀರು ನುಗ್ಗಿ ಅನಾಹುತವನ್ನೇ ಸೃಷ್ಟಿ ಮಾಡಿದೆ.

English summary
The Well Marked Low-Pressure Area persists over northeast Rajasthan and adjoining areas of northwest Madhya Pradesh and southwest Uttar Pradesh. It is very likely to move gradually northwestwards along the monsoon trough and weaken by 20th morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X