ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವದೆಹಲಿಯಲ್ಲಿ ನಿರಂತರ ಮಳೆಯಿಂದ ರಸ್ತೆಗಳಲ್ಲೇ ನದಿಗಳು!

|
Google Oneindia Kannada News

ನವದೆಹಲಿ, ಆಗಸ್ಟ್.20: ಮಳೆಯ ಹೊಡೆತಕ್ಕೆ ರಾಷ್ಟ್ರ ರಾಜಧಾನಿಯ ಜನರು ತತ್ತರಿಸಿ ಹೋಗಿದ್ದಾರೆ. ನವದೆಹಲಿ ಮತ್ತು ಎನ್ ಸಿಆರ್ ಹಲವು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

Recommended Video

Rama ಭಕ್ತರಿಗೆ ಕರೆಕೊಟ್ಟ ಚಂಪತ್ ರೈ | Oneindia Kannada

ನವದೆಹಲಿಯ ಹಲವು ಪ್ರದೇಶಗಳಲ್ಲಿ ಈಗಾಗಲೇ ಸುರಿದಿರುವ ಮಳೆ ಅವಾಂತರಗಳನ್ನು ಸೃಷ್ಟಿಸಿದೆ. ಗೌತಮ್ ಬುದ್ಧ ನಗರದಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲೆ ಜಲಾವೃತಗೊಂಡಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ

ಇನ್ನೊಂದಡೆ ದೆಹಲಿಯ ಮಯೂರ್ ವಿಹಾರದ ಮೂರನೇ ಹಂತದಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆಗಳಲ್ಲೇ ನೀರು ನಿಂತುಕೊಂಡಿದೆ. ಇದರಿಂದಾಗ ವಾಹನ ಸವಾರರು ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.

Rain Update: Heavy Rain Continued In Several Parts Of Delhi And NCR


ರಾಷ್ಟ್ರ ರಾಜಧಾನಿಯ ರಸ್ತೆಗಳಲ್ಲೇ ನದಿಗಳು:

ನವದೆಹಲಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರ ರಾಜಧಾನಿಯ ರಸ್ತೆಗಳಲ್ಲ ನದಿಗಳಾಗಿ ಮಾರ್ಪಡುತ್ತಿವೆ. ಬರಫ್ ಖಾನಾ ಪ್ರದೇಶದಲ್ಲಿ ಮಳೆ ಆರ್ಭಟದಿಂದ ರಸ್ತೆಗಳೆಲ್ಲ ಜಲಾವೃತಗೊಂಡಿವೆ. ಈ ನಡುವೆ ನವದೆಹಲಿಯಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

"ಗುರುವಾರವರೆಗೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಒಂದು ಅಥವಾ ಎರಡು ಮಳೆ ಸುರಿಯುವ ಸಾಧ್ಯತೆಗಳಿವೆ" ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಪ್ರಾದೇಶಿಕ ಮುನ್ಸೂಚನೆ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ತಿಳಿಸಿದ್ದಾರೆ.

ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.

English summary
Rain Update: Heavy Rain Continued In Several Parts Of Delhi And NCR.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X