• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಯ ಹುಟ್ಟಿಸಲು ಬಹುಮತವನ್ನು ರಾಜೀವ್ ಗಾಂಧಿ ಬಳಸಿರಲಿಲ್ಲ: ಸೋನಿಯಾ ಗಾಂಧಿ

|

ನವದೆಹಲಿ, ಆಗಸ್ಟ್ 22: ರಾಜೀವ್ ಗಾಂಧಿ ಅವರಿಗೆ 1984 ರ ಸಾರ್ವತ್ರಿಕ ಚುನಾವಣೆಯಲ್ಲಿ ಸಿಕ್ಕ ಬಹುಮತವನ್ನು ಅವರು ಭಯದ ವಾತಾವರಣ ಸೃಷ್ಟಿಸಲು ಹಾಗೂ ಜನರ ಸ್ವಾತಂತ್ರ್ಯವನ್ನು ಹರಣ ಮಾಡಲು ಬಳಸಿರಲಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.

ಸೋನಿಯಾ ಗಾಂಧಿ ಅವರು ರಾಜೀವ್ ಗಾಂಧಿ 75ನೇ ವರ್ಷದ ಜಯಂತಿ ಪ್ರಯುಕ್ತ ದೆಹಲಿಯ ಕೆಡಿ ಜಾಧವ್ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಲವು ಕಾಂಗ್ರೆಸ್ ಪ್ರಮುಖ ಮುಖಂಡರು, ಕಾರ್ಯಕರ್ತರು ಸೇರಿದ್ದರು.

ಒಂದು ತಿಂಗಳ ಪೆರೋಲ್ ಮೇಲೆ ಹೊರ ಬಂದ ರಾಜೀವ್ ಗಾಂಧಿ ಹಂತಕಿ

ಬಿಜೆಪಿ ಅಥವಾ ನರೇಂದ್ರ ಮೋದಿ ಹೆಸರು ಉಲ್ಲೇಖಿಸಿದರೆ ಪರೋಕ್ಷವಾಗಿ ಕೇಂದ್ರ ಸರ್ಕಾರವನ್ನು ಚುಚ್ಚಿದ ಅವರು, ರಾಜೀವ್ ಗಾಂಧಿ ಅವರಿಗೆ ಸಿಕ್ಕ ಬಹುಮತವನ್ನು ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಪಮೌಲ್ಯಗೊಳಿಸಲು ಬಳಸಿರಲಿಲ್ಲ ಎಂದರು.

ಭಾರತವನ್ನು ವಿಭಜನೆ ಮಾಡಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡುವುದನ್ನು ಕಾಂಗ್ರೆಸ್ ಪಕ್ಷ ನಿಲ್ಲಿಸಬಾರದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳು ಮಾಡಲು ಯತ್ನಿಸುತ್ತಿರುವವರ ವಿರುದ್ಧ ಪ್ರತಿರೋಧವಾಗಿ ನಾವು ನಿಲ್ಲಬೇಕಿದೆ ಎಂದು ಸೋನಿಯಾ ಗಾಂಧಿ ಹೇಳಿದರು.

ರಾಜೀವ್ ಗಾಂಧಿ ಜನ್ಮದಿನದಂದು ಪ್ರಿಯಾಂಕಾ ಗಾಂಧಿ ಭಾವುಕ ಟ್ವೀಟ್

ಭಾರತದ ವಿವಿಧತೆಯನ್ನು ಆಚರಿಸುವ ಮೂಲಕವೇ ಭಾರತದ ಒಗ್ಗಟ್ಟನ್ನು ಕಾಯ್ದುಕೊಳ್ಳಬಹುದು ಎಂದು ರಾಜೀವ್ ಗಾಂಧಿ ತೋರಿಸಿಕೊಟ್ಟಿದ್ದಾರೆ. ರಾಜೀವ್ ಗಾಂಧಿ ಪ್ರಧಾನಿ ಆಗಿದ್ದಾಗ ಮಾಡಿದ ಉತ್ತಮ ಕಾರ್ಯಗಳನ್ನು ಇನ್ನಾರು ಮಾಡಲಾರರು ಎಂದು ಸೋನಿಯಾ ಪ್ರಶಂಶಿಸಿದರು.

ರಾಜೀವ್ ಗಾಂಧಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಕಾಂಗ್ರೆಸ್ ಪಕ್ಷವು ಸಮಸ್ಯೆಗಳನ್ನು ಎದುರಿಸುತ್ತಿದೆ ಆದರೆ ಅದು ವಿಭಜಕ ಶಕ್ತಿಗಳ ವಿರುದ್ಧದ ಹೋರಾಟವನ್ನು ಎಂದಿಗೂ ನಿಲ್ಲಿಸಬಾರದು ಎಂದು ಸೋನಿಯಾ ಗಾಂಧಿ ಕರೆ ನೀಡಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Rajiv Gandhi came to power in 1984 but he never used powers to create an atmosphere of fear or to destroy the freedom & liberty of the people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more