ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

|
Google Oneindia Kannada News

ನವದೆಹಲಿ, ಆಗಸ್ಟ್‌ 21: ಅಶೋಕ್ ಲವಾಸಾ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ಶುಕ್ರವಾರ ರಾತ್ರಿ ಅಧಿಸೂಚನೆಯಲ್ಲಿ ತಿಳಿಸಿದೆ.

ಆಗಸ್ಟ್ 31 ರಂದು ಚುನಾವಣಾ ಆಯುಕ್ತ ಅಶೋಕ್ ಲವಾಸಾ ತಮ್ಮ ಕಚೇರಿಯನ್ನು ತೊರೆದ ದಿನ ಶ್ರೀ ಕುಮಾರ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕೋವಿಡ್ ಕಾಲದಲ್ಲಿ ಎಲೆಕ್ಷನ್: ಪ್ರಚಾರ, ಮತದಾನಕ್ಕೆ ನಿಯಮ ರೂಪಿಸಿದ ಚುನಾವಣಾ ಆಯೋಗಕೋವಿಡ್ ಕಾಲದಲ್ಲಿ ಎಲೆಕ್ಷನ್: ಪ್ರಚಾರ, ಮತದಾನಕ್ಕೆ ನಿಯಮ ರೂಪಿಸಿದ ಚುನಾವಣಾ ಆಯೋಗ

ಮುಖ್ಯ ಚುನಾವಣಾ ಆಯುಕ್ತರ ಹುದ್ದೆಗೆ ರಾಜೀನಾಮೆ ನೀಡಿದ್ದ ಲವಾಸಾ ರಾಷ್ಟ್ರಪತಿ ಭವನಕ್ಕೆ ಈಗಾಗಲೇ ಪತ್ರ ಬರೆದು ಆಗಸ್ಟ್ 31ಕ್ಕೆ ತಮ್ಮ ಸೇವೆಯಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದರು. ಅವರು ಶೀಘ್ರದಲ್ಲೇ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನ (ಎಡಿಬಿ) ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

Rajiv Kumar Appointed As The Election Commissioner

ಇನ್ನು ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಜಾರ್ಖಂಡ್ ಕೇಡರ್‌ನಿಂದ 1984 ರ ಬ್ಯಾಚ್‌ನ ನಿವೃತ್ತ ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿದ್ದಾರೆ.

"ಶ್ರೀ ರಾಜೀವ್ ಕುಮಾರ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ. ಅವರು ಆಗಸ್ಟ್ 31, 2020 ರಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿರುವ ಚುನಾವಣಾ ಆಯುಕ್ತರಾದ ಶ್ರೀ ಅಶೋಕ್ ಲವಾಸಾ ಅವರನ್ನು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರಲಿದೆ" ಎಂದು ಕಾನೂನು ಸಚಿವಾಲಯ ತಿಳಿಸಿದೆ

English summary
Rajiv Kumar appointed as the Election Commissioner following the resignation of Ashok Lavasa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X