ರಾಷ್ಟ್ರಪತಿ ಚುನಾವಣೆ: ಸೋನಿಯಾ ನಿವಾಸದಲ್ಲಿ ರಾಜನಾಥ್, ನಾಯ್ಡು ಚರ್ಚೆ
ನವದೆಹಲಿ, ಜೂನ್ 16: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಇಂದಿನ(ಜೂನ್ 16) ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಮುಖಂಡರಾದ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ವಾರ್ತಾ ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಜುಲೈ 17 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಆರಿಸಲಿರುವ ಅಭ್ಯರ್ಥಿಗೆ ಒಮ್ಮತದ ಸಹಕಾರ ನೀಡಬೇಕೆಂದು ಕೋರುವುದಕ್ಕಾಗಿ, ಬಿಜೆಪಿ ನಾಯಕರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಈಗಾಗಲೇ ಮಾತುಕತೆ ಆರಂಭವಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ರಾಷ್ಟ್ರಪತಿ ಅಭ್ಯರ್ಥಿಯ ಕುರಿತು ಸ್ಪಷ್ಟ ಚಿತ್ರಣ ದೊರಕಲಿದೆ.

ಜುಲೈ 20 ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಹೊರಬೀಳುತ್ತದೆ.












Click it and Unblock the Notifications