Breaking: ಸೇನಾ ಹೆಲಿಕಾಪ್ಟರ್ ಪತನ ಕುರಿತು ಲೋಕಸಭೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆ
ನವದೆಹಲಿ, ಡಿಸೆಂಬರ್ 09: ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಮಂದಿ ಇದ್ದ ಸೇನಾ ಹೆಲಿಕಾಪ್ಟರ್ ಪತನ ಕುರಿತು ಲೋಕಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ, ಮಿಲಿಟರಿ ಗೌರವದೊಂದಿಗೆ ನಡೆಸಲಾಗುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು.
ಗ್ರೂಪ್ ಕ್ಯಾಪ್ಟನ್ ವುರಣ್ ಸಿಂಗ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಅತ್ಯುನ್ನತ ಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದರು.

ಹೆಲಿಕಾಪ್ಟರ್ ಲ್ಯಾಂಡ್ ಆಗುವ 7 ನಿಮಿಷಗಳ ಮೊದಲು ಪತನಗೊಂಡಿದೆ ಎಂದು ರಾಜನಾಥ್ ಸಿಂಗ್ ಹೇಳಿಕೆ ನೀಡಿದರು. ಸುಲೂರು ವಾಯುನೆಯಿಂದ 11.48ಕ್ಕೆ ಹೆಲಿಕಾಪ್ಟರ್ ಟೇಕಾಫ್ ಆಗಿತ್ತು.
12.08ಕ್ಕೆ ಹೆಲಿಕಾಪ್ಟರ್ ಸಂಪೂರ್ಣ ಸಂಪರ್ಕ ಕಳೆದುಕೊಂಡಿತು ಎಂದು ರಾಜನಾಥ್ ಸಿಂಗ್ ಲೋಕಸಭೆಗೆ ಹೇಳಿದರು.












Click it and Unblock the Notifications